ಪಟಾಕಿ ಅವಾಂತರ: ರಾಕೆಟ್ ಸಿಡಿದು ಬಾಲಕನ ಖಾಸಗಿ ಅಂಗಕ್ಕೆ ಗಾಯ, ದೂರು ದಾಖಲು
ರಾಕೆಟ್ ಹಾರಿಸಿ 10 ವರ್ಷದ ಬಾಲಕನ ಖಾಸಗಿ ಅಂಗಗಳಿಗೆ ಗಾಯವಾಗುವಂತೆ ಮಾಡಿದ ಹಿನ್ನೆಲೆಯಲ್ಲಿ 24 ವರ್ಷದ ಯುವಕನೊಬ್ಬನ ವಿರುದ್ಧ ದೂರು ದಾಖಲಾಗಿದೆ.

ಬೆಂಗಳೂರು: ರಾಕೆಟ್ ಹಾರಿಸಿ 10 ವರ್ಷದ ಬಾಲಕನ ಖಾಸಗಿ ಅಂಗಗಳಿಗೆ ಗಾಯವಾಗುವಂತೆ ಮಾಡಿದ ಹಿನ್ನೆಲೆಯಲ್ಲಿ 24 ವರ್ಷದ ಯುವಕನೊಬ್ಬನ ವಿರುದ್ಧ ದೂರು ದಾಖಲಾಗಿದೆ.
ಮಂಗಳವಾರ ಈ ಘಟನೆ ನಡೆದಿದ್ದು, ಎರಡು ದಿನಗಳ ನಂತರ ಮಲ್ಲಿಕಾರ್ಜುನ ಎಂಬುವವರ ವಿರುದ್ಧ ದೂರು ದಾಖಲಾಗಿದೆ.
ಗಾಯಾಳು ಬಾಲಕ ಹಾಗೂ ಮಲ್ಲಿಕಾರ್ಜುನ ಇಬ್ಬರು ಹೊಸನಗರ ನಿವಾಸಿಗಳಾಗಿದ್ದಾರೆ. ಬಾಲಕನ ಚಿಕ್ಕಮ್ಮ ಯುವನ ವಿರುದ್ಧ ದೂರು ದಾಖಲಿಸಿದ್ದಾರೆ.
ನೆರೆಮನೆಯಾತನಾಗಿದ್ದ ಮಲ್ಲಿಕಾರ್ಜುನ ಅವರು, ರಾಕೆಟ್ ಹಾರಿಸಿ ಉದ್ದೇಶ ಪೂರ್ವಕವಾಗಿಯೇ ಗಾಯವಾಗುವಂತೆ ಮಾಡಿದ್ದಾರೆಂದು ಬಾಲಕ ಹೇಳಿಕೊಂಡಿದ್ದಾನೆ. ಇದರಿಂದ ಎರಡೂ ಕುಟುಂಬಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಬಾಲಕನ ತಾಯಿಯ ಮೇಲೆ ಯುವಕ ಹಲ್ಲೆ ನಡೆಸಿ, ಬೆದರಿಕೆ ಹಾಕಿದ್ದಾನೆಂದು ತಿಳಿದುಬಂದಿದೆ.
ನಾವು ಪಟಾಕಿ ಹೊಡೆಯುತ್ತಿರಲಿಲ್ಲ. ಪಟಾಕಿ ಹೊಡೆಯುತ್ತಿರುವುದನ್ನು ಬಾಲಕ ನೋಡುತ್ತಿದ್ದ. ಬಾಲನಕ ಜೊತೆಗೆ ಆತನ ಸಹೋದರಿಗೂ ಥಳಿಸಲಾಗಿದೆ ಎಂದು ದೂರಿನಲ್ಲಿ ಹೇಳಿದ್ದಾರೆ. ಎರಡೂ ಕುಟುಂಬಗಳೂ ದೂರು ದಾಖಲಿಸಿವೆ. ಇಬ್ಬರಿಂದಲೂ ಹೇಳಿಕೆ ದಾಖಲು ಮಾಡಿಕೊಳ್ಳಲಾಗಿದೆ. ಇದೀಗ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಪ್ರಕರಣದ ತನಿಖೆ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪ ನಿಜವೇ ಎಂದು ಖಚಿತಪಡಿಸಿಕೊಳ್ಳಲು ವೈದ್ಯಕೀಯ ಬಿಲ್‌ಗಳ ಸಲ್ಲಿಸುವಂತೆ ಬಾಲಕನ ಕುಟುಂಬಸ್ಥರಿಗೆ ಪೊಲೀಸರು ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


