ರಾಜ್ಯ

''ಜಗತ್ತಿನಲ್ಲಿ ಒಬ್ಬರಿಂದ ಅತ್ಯಾಚಾರ ಸಾಧ್ಯವಿಲ್ಲ': ಕಾಂಗ್ರೆಸ್ ಮಾಜಿ ಶಾಸಕ ಹೇಳಿಕೆ!

ಕುಷ್ಟಗಿ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆಯೊಂದರ ಆರೋಪ ಕೇಳಿಬಂದಿದೆ. 'ಒಂದೇ ಕೈಯಲ್ಲಿ ಚಪ್ಪಾಳೆ ತಟ್ಟಲು ಸಾಧ್ಯವಿಲ್ಲ, ಹಾಗೆ ಜಗತ್ತಿನಲ್ಲಿ ಒಬ್ಬರಿಂದ ಅತ್ಯಾಚಾರ ಮಾಡಲು ಸಾಧ್ಯವಿಲ್ಲ ಎಂಬ ಅವರ ಫೋನ್​ ಸಂಭಾಷಣೆಯ ಆಡಿಯೋ ವೈರಲ್​ ಆಗಿದೆ.

''ಜಗತ್ತಿನಲ್ಲಿ ಒಬ್ಬರಿಂದ ಅತ್ಯಾಚಾರ ಸಾಧ್ಯವಿಲ್ಲ': ಕಾಂಗ್ರೆಸ್ ಮಾಜಿ ಶಾಸಕ ಹೇಳಿಕೆ!
ಅಮರೇಗೌಡ ಬಯ್ಯಾಪುರ
Published On :

ಕೊಪ್ಪಳ: ಕುಷ್ಟಗಿ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆಯೊಂದರ ಆರೋಪ ಕೇಳಿಬಂದಿದೆ. 'ಒಂದೇ ಕೈಯಲ್ಲಿ ಚಪ್ಪಾಳೆ ತಟ್ಟಲು ಸಾಧ್ಯವಿಲ್ಲ, ಹಾಗೆ ಜಗತ್ತಿನಲ್ಲಿ ಒಬ್ಬರಿಂದ ಅತ್ಯಾಚಾರ ಮಾಡಲು ಸಾಧ್ಯವಿಲ್ಲ ಎಂಬ ಅವರ ಫೋನ್​ ಸಂಭಾಷಣೆಯ ಆಡಿಯೋ ವೈರಲ್​ ಆಗಿದೆ.

ಕಾಂಗ್ರೆಸ್​ ಮುಖಂಡ ಸಂಗನಗೌಡ ನನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಿ ಸಂತ್ರಸ್ತೆಯೊಬ್ಬರು ಅಕ್ಟೋಬರ್ 10 ರಂದು ಎಂ. ಗುಡದೂರು ಗ್ರಾಮದ ಕೊಪ್ಪಳ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದರೆ, ದೂರು ದಾಖಲಿಸಿಕೊಂಡಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇದರಿಂದಾಗಿ ಎಸ್ಪಿಗೆ ದೂರು ನೀಡಿದ್ದ ಸಂತ್ರಸ್ತೆಯ ಮಾವ ಯಮನೂರಪ್ಪ, ನೊಂದ ಸಂತ್ರಸ್ತೆಗೆ ನ್ಯಾಯ ಒದಗಿಸುವಂತೆ ಅಮರೇಗೌಡ ಬಯ್ಯಾಪುರ ಅವರ ಬಳಿಯೂ  ಮನವಿ ಮಾಡಿದ್ದರು ಎನ್ನಲಾಗಿದೆ. 

ಆದರೆ,  ಆರೋಪಿ ಪರವಾಗಿಯೇ ನಿಲುವು ತಾಳಿರುವ ಮಾಜಿ ಶಾಸಕರು, ಎಸ್ ಪಿಗೆ ದೂರು ನೀಡಬಾರದಿತ್ತು  “ನಿಮ್ಮ ಮರ್ಯಾದೆಯನ್ನು ನೀವೆ ಕಳೆದುಕೊಳ್ಳುತ್ತಿದ್ದೀಯಾ, ಒಬ್ಬರಿಂದ ಹೇಗೆ ಅತ್ಯಾಚಾರ ಮಾಡಲು ಸಾಧ್ಯ? ನೀನು ಒಬ್ಬನನ್ನು ಕರೆದುಕೊಂಡು ಬಾ, ನಾನು ಓರ್ವ ಮಹಿಳೆಯನ್ನು ಕಳುಹಿಸುತ್ತೇನೆ. ಆ ವ್ಯಕ್ತಿ ಆಕೆಯನ್ನು ಅತ್ಯಾಚಾರ ಮಾಡಲಿ ನೋಡೋಣ, ಒಬ್ಬನಿಂದ ಅತ್ಯಾಚಾರ ಮಾಡಲು ಸಾಧ್ಯವಿಲ್ಲ. ಸೂಕ್ಷ್ಮ ವಿಚಾರ ಇದು, ಮರ್ಯಾದೆ ಪ್ರಶ್ನೆ ಇದೆ ಯೋಚಿಸು” ಎಂದು  ಸಂತ್ರಸ್ತೆ ಮಾವನಿಗೆ ಹೇಳುವ ಫೋನ್ ಸಂಭಾಷಣೆ ಆಡಿಯೋ ವೈರಲ್ ಆಗಿದ್ದು, ಅಮರೇಗೌಡ ಬಯ್ಯಾಪುರ ವಿರುದ್ಧ ಟೀಕೆಗಳು ವ್ಯಕ್ತವಾಗುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.