ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ಮಾಡಿದ ಬಿಜೆಪಿ ಮಾಜಿ ಸಚಿವ ಶ್ರೀರಾಮುಲು!
ಕರ್ನಾಟಕದ ಮಾಜಿ ಸಚಿವ ಬಿ ಶ್ರೀರಾಮುಲು ಅವರು ಇಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದು ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ಊಹಾಪೋಹಗಳಿಗೆ ಕಾರಣವಾಗಿದೆ.

ಬೆಂಗಳೂರು: ಕರ್ನಾಟಕದ ಮಾಜಿ ಸಚಿವ ಬಿ ಶ್ರೀರಾಮುಲು ಅವರು ಇಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದು ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ಊಹಾಪೋಹಗಳಿಗೆ ಕಾರಣವಾಗಿದೆ.
ಇತ್ತೀಚೆಗಷ್ಟೇ ಬಿಜೆಪಿ ಹೈಕಮಾಂಡ್ ಕರ್ನಾಟಕದ ರಾಜ್ಯಾಧ್ಯಕ್ಷರನ್ನಾಗಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರನ್ನು ನೇಮಿಸಿದ ಹಿನ್ನೆಲೆಯಲ್ಲಿ ಈ ಸಭೆ ನಡೆದಿದೆ. ಈ ಕ್ರಮವು ಆ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಶ್ರೀರಾಮುಲು ಅವರು ಅಸಮಾಧಾನಗೊಳ್ಳುವಂತೆ ಮಾಡಿದೆ ಎಂದು ವರದಿಯಾಗಿದೆ.
ಮೂಲಗಳ ಪ್ರಕಾರ, ಶ್ರೀರಾಮುಲು ಅವರು ತಮ್ಮ ಮಗಳ ಮದುವೆಗೆ ಶಿವಕುಮಾರ್ ಅವರನ್ನು ಆಹ್ವಾನಿಸಲು ಅವರ ನಿವಾಸಕ್ಕೆ ಭೇಟಿ ನೀಡಿದ್ದರು ಎಂದು ತಿಳಿದುಬಂದಿದೆ.
ಶ್ರೀರಾಮುಲು ಅವರು ರಾಜ್ಯದ ಹಿಂದಿನ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ 2021ರ ಆಗಸ್ಟ್ 4 ರಿಂದ 2023ರ ಮೇ 13ರವರೆಗೆ ಸಾರಿಗೆ ಇಲಾಖೆ ಮತ್ತು ಬುಡಕಟ್ಟು ಕಲ್ಯಾಣ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅವರು 2020ರ ಅಕ್ಟೋಬರ್ 12 ರಿಂದ 2021ರ ಜುಲೈ 26ರವರೆಗೆ ಕರ್ನಾಟಕದ ಸಮಾಜ ಕಲ್ಯಾಣ ಇಲಾಖೆಯ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆಗೂ ಮುನ್ನ ಶ್ರೀರಾಮುಲು ಅವರು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗುವುದನ್ನು ನೋಡಲು ಬಯಸುವುದಾಗಿ ಕಾರ್ಯಕ್ರಮವೊಂದರಲ್ಲಿ ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


