ವಿದ್ಯುತ್ ತಂತಿ ತುಳಿದು ತಾಯಿ-ಮಗು ಸಾವು ಪ್ರಕರಣ; ಪೊಲೀಸರ ವಿರುದ್ಧ ಕುಟುಂಬಸ್ಥರ ಅಸಮಾಧಾನ
ವೈಟ್ ಫೀಲ್ಡ್ ಬಳಿ ವಿದ್ಯುತ್ ತಂತಿ ತುಳಿದು ತಾಯಿ ಮತ್ತು ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಮಹಿಳೆಯ ಕುಟುಂಬಸ್ಥರು ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ವೈಟ್ ಫೀಲ್ಡ್ ಬಳಿ ವಿದ್ಯುತ್ ತಂತಿ ತುಳಿದು ತಾಯಿ ಮತ್ತು ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಮಹಿಳೆಯ ಕುಟುಂಬಸ್ಥರು ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರ ವಿರುದ್ಧ ಆಕ್ರೋಶ ಹೊರಹಾಕಿರುವ ಕುಟುಂಬಸ್ಥರು, ಪ್ರತೀ ಅಧಿಕಾರಿಯೂ ರೂ.10 ಲಕ್ಷ ಪರಿಹಾರ ನೀಡಬೇಕು ಹಾಗೂ ಸರ್ಕಾರಿ ಉದ್ಯೋಗ ಕೊಡಬೇಕೆಂದು ಆಗ್ರಹಿಸುತ್ತಿದ್ದಾರೆ.
ಪೊಲೀಸರ ತನಿಖೆಯಲ್ಲಿ ಪಾರದರ್ಶಕತೆಯಿಲ್ಲ. ತನಿಖೆಯ ಬಗ್ಗೆ ಯಾವುದೇ ಮಾಹಿತಿಗಳನ್ನೂ ನೀಡುತ್ತಿಲ್ಲ. ನಮಗೆ ಮಾಹಿತಿ ನೀಡದೆಯೇ ತಪ್ಪಿತಸ್ಥ ಅಧಿಕಾರಿಗಳನ್ನು ಬಂಧನವಾದ ಕೆಲವೇ ಗಂಟೆಗಳಲ್ಲಿ ಠಾಣೆಯ ಜಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ಬೆಸ್ಕಾಂ ಅಧಿಕಾರಿಗಳ ವಿರುದ್ಧ ನಡೆಸಲಾಗುತ್ತಿರುವ ತನಿಖೆ ಬಗ್ಗೆ ನಮಗೆ ಮಾಹಿತಿ ನೀಡಬೇಕೆಂದು ಹೇಳಿದ್ದಾರೆ.
ಘಟನೆ ಬಳಿಕ ಸ್ಥಳೀಯ ಶಾಸಕರು ಸ್ಥಳಕ್ಕೆ ಬರುವುದಾಗಲೀ ನಮಗೆ ಸಾಂತ್ವನ ಹೇಳುವ ಕೆಲಸವಾಗಲೀ ಮಾಡಲಿಲ್ಲ. ಯಾವೊಬ್ಬ ಅಧಿಕಾರಿ ಕೂಡ ನಮ್ಮನ್ನ ಭೇಟಿ ಮಾಡಲು ಬರಲಿಲ್ಲ ಎಂದು ಕಿಡಿಕಾರಿದ್ದಾರೆ.
ಅಲ್ಲದೆ, ಪತಿಯ ಇಚ್ಛೆಗೆ ವಿರುದ್ಧವಾಗಿ ತಮಿಳುನಾಡಿನ ಕಡಲೂರಿನಲ್ಲಿ ಅಂತ್ಯಕ್ರಿಯೆ ನಡೆಸಬೇಕೆಂದು ಪೊಲೀಸರು ಸೌಂದರ್ಯ ಅವರ ತಾಯಿ ಮೇಲೆ ಒತ್ತಡ ಹೇರಿದ್ದರು ಎಂದು ಆರೋಪಿಸಿದ್ದಾರೆ.
ಈ ನಡುವೆ ಮೃತ ಮಹಿಳೆ ಸೌಂದರ್ಯ ಅವರ ಮರಣೋತ್ತರ ಪರೀಕ್ಷೆ ಭಾನುವಾರ ಪೂರ್ಣಗೊಂಡಿತ್ತು. ಆದರೆ, ಮೃತದೇಹ ಸ್ವೀಕರಿಸಲು ಕುಟುಂಬಸ್ಥರು ವಿಳಂಬ ಮಾಡಿದ್ದು, ಹಲವಾರು ಷರತ್ತುಗಳನ್ನು ಹಾಕಿದ್ದರು ಎಂದು ತಿಳಿದುಬಂದಿದೆ.
ಬಳಿಕ ಅಧಿಕಾರಿಗಳು ಮೃತದೇಹವನ್ನು ಎಕೆಜಿ ಕಾಲೋನಿಯಲ್ಲಿರುವ ಸೌಂದರ್ಯ ಅವರ ನಿವಾಸಕ್ಕೆ ಸ್ಥಳಾಂತರಿಸಿದಾಗ ಕೆಂಡಾಮಂಡಲಗೊಂಡ ಕುಟುಂಬ ಸದಸ್ಯರು ಘೋಷಣೆಗಳನ್ನು ಕೂಗಿ, ಪ್ರತಿಭಟಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


