ರೌಡಿ ಶೀಟರ್‌ಗೆ ನೀಡಿದ್ದ ‘ರಾಜ್ಯೋತ್ಸವ ಪ್ರಶಸ್ತಿ’ ವಾಪಸ್: 'ಕೊತ್ವಾಲನ ಶಿಷ್ಯರು ಅಧಿಕಾರದಲ್ಲಿದ್ದರೆ ಏನಾಗುತ್ತದೆ ಎಂಬುದಕ್ಕೆ ಇದೇ ಸಾಕ್ಷಿ!'
ರೌಡಿ ಶೀಟರ್‌ಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಪ್ರಶಸ್ತಿಯನ್ನು ವಾಪಸ್ಸು ಪಡೆಯಲು ಮೈಸೂರು ಜಿಲ್ಲಾಡಳಿತ ಮುಂದಾಗಿದೆ.

ಮೈಸೂರು: ರೌಡಿ ಶೀಟರ್‌ಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಪ್ರಶಸ್ತಿಯನ್ನು ವಾಪಸ್ಸು ಪಡೆಯಲು ಮೈಸೂರು ಜಿಲ್ಲಾಡಳಿತ ಮುಂದಾಗಿದೆ.
ಮೈಸೂರಿನ ಲಷ್ಕರ್ ಠಾಣೆಯಲ್ಲಿ ರೌಡಿ ಶೀಟರ್ ಆಗಿರುವ ಅಶೋಕ್ ಅವರು ಕಾಂಗ್ರೆಸ್ ಮುಖಂಡ ಎಂಬ ಕಾರಣಕ್ಕೆ ನವೆಂಬರ್1 ರಂದು ಮೈಸೂರು ಜಿಲ್ಲಾಡಳಿತ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು. ನೀಡಿರುವ ಪ್ರಶಸ್ತಿಯನ್ನು ವಾಪಸ್ ಪಡೆಯುತ್ತೇವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸುದರ್ಶನ್ ಹೇಳಿದ್ದಾರೆ.
ಮೈಸೂರಿನ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ಮುಖಂಡ ಡಾ. ಕೆ.ಎಂ ಅಶೋಕ್ ವಿರುದ್ಧ ರೌಡಿ ಶೀಟರ್ ಪಟ್ಟಿ ತೆರೆಯಲಾಗಿದೆ. ಆದರೆ, ಆತನಿಗೆ ಕನ್ನಡ ರಾಜ್ಯೋತ್ಸವ ದಿನದಂದು ಮೈಸೂರು ಜಿಲ್ಲಾಡಳಿತ ರಾಜ್ಯೋತ್ಸವ ಪ್ರಶಸ್ತಿ ನೀಡಿತ್ತು. ಆತನ ವಿರುದ್ಧ ರೌಡಿ ಶೀಟರ್ ಆರೋಪ ಇರುವ ಬಗ್ಗೆ ವರದಿಯಾದ ಬಳಿಕ, ಪ್ರಶಸ್ತಿಯನ್ನು ವಾಪಸ್ ಪಡೆಯುವುದಾಗಿ ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.
ಅಶೋಕ್ ಕಾಂಗ್ರೆಸ್‌ನಲ್ಲಿ ತೊಡಗಿಸಿಕೊಂಡಿದ್ದಾರೆ. ಅವರ ಮಗ ಇತ್ತೀಚೆಗೆ ಪುಂಡಾಟ ತೋರಿಸಿದ್ದರು. ಆತನ ವರ್ತನೆಯಿಂದಾಗಿ ಅಶೋಕ್ ವಿರುದ್ಧ ರೌಡಿ ಶೀಟರ್ ಎಂದು ಪ್ರಕರಣ ದಾಖಲಾಗಿರುವುದು ತಿಳಿದುಬಂದಿತ್ತು.
ಕೊತ್ವಾಲನ (ಕು)ಖ್ಯಾತ ಶಿಷ್ಯರು ಅಧಿಕಾರದಲ್ಲಿದ್ದರೆ ಏನಾಗುತ್ತದೆ ಎಂಬುದಕ್ಕೆ ಈ ಘಟನೆಯೇ ನಿದರ್ಶನ ..ಈತ ರೌಡಿ ಶೀಟರ್ ಎಂಬುದು ಗೊತ್ತಿದ್ದೂ ಸಹ ರಾಜ್ಯೋತ್ಸವ ಕೊಟ್ಟಿದ್ದು ಯಾರ ಒತ್ತಡದ ಮೇರೆಗೆ ಎಂದು ಜಿಲ್ಲಾಡಳಿತ ಬಹಿರಂಗಪಡಿಸಲಿ...ಪ್ರಶಸ್ತಿಯ ಪಾವಿತ್ರ್ಯತೆ ಹಾಳು ಮಾಡಿದ ಜಿಲ್ಲಾಡಳಿತ, ಹಾಗೂ ಕೆಲ ಪಟ್ಟಭದ್ರಹಿತಾಸಕ್ತಿಗಳು 'ಸಾಂಸ್ಕೃತಿಕ ನಗರಿಯನ್ನು' ಅಸಂಸ್ಕೃತರ ತವರೂರಾಗಿ' ಮಾಡುವುದು ಹೊರಟಿರುವುದು ರಾಜ್ಯದ ದುರಂತ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಲೇವಡಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


