ವಿಜಯಪುರ: ಶಾಲಾ ಕಟ್ಟಡದಿಂದ ಬಿದ್ದು ಯುಕೆಜಿ ವಿದ್ಯಾರ್ಥಿ ಸಾವು
ವಿಜಯಪುರ ಜಿಲ್ಲೆ ಇಂಡಿ ಪಟ್ಟಣದ ಆರ್. ಎಂ ಶಾಹಾ ಶಾಲೆಯ ಮೊದಲ ಮಹಡಿಯಿಂದ ಆಯತಪ್ಪಿ ಬಿದ್ದು ಇಂಡಿ ತಾಲೂಕಿನ ಮಾವಿನಳ್ಳಿ ಗ್ರಾಮದ ಶಿವರಾಜ್ ರೋಡಗಿ ಮೃತಪಟ್ಟಿದ್ದಾನೆ.

ವಿಜಯಪುರ: ವಿಜಯಪುರ ಜಿಲ್ಲೆ ಇಂಡಿ ಪಟ್ಟಣದ ಆರ್. ಎಂ ಶಾಹಾ ಶಾಲೆಯ ಮೊದಲ ಮಹಡಿಯಿಂದ ಆಯತಪ್ಪಿ ಬಿದ್ದು ಇಂಡಿ ತಾಲೂಕಿನ ಮಾವಿನಳ್ಳಿ ಗ್ರಾಮದ ಶಿವರಾಜ್ ರೋಡಗಿ ಮೃತಪಟ್ಟಿದ್ದಾನೆ.
ಯುಕೆಜಿ ತರಗತಿಯಲ್ಲಿ ಓದುತ್ತಿದ್ದ ಶಿವರಾಜ್ ರೋಡಗಿ ಇಂದು ಬೆಳಗ್ಗೆ ಶಾಲೆಯ ಮೊದಲ ಮಹಡಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ ಎನ್ನಲಾಗಿದೆ. ಕೆಳಗೆ ಬಿದ್ದಿದ್ದರಿಂದ ಶಿವರಾಜ್ ತಲೆಗೆ ಗಂಭೀರ ಗಾಯವಾಗಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ತಮ್ಮ ಮಗ ಶಾಲೆಯ ಕಟ್ಟಡದಿಂದ ಕೆಳಗೆ ಬಿದ್ದಿದ್ದಾನೆ ಎಂದು ಪೋಷಕರಿಗೆ ಮಾಹಿತಿ ನೀಡಿದ ಶಾಲೆಯವರು ಆತನನ್ನು ಆಸ್ಪತ್ರೆಗೆ ಕರೆ ತಂದಿದ್ದಾರೆ. ಇನ್ನು ಶಿವರಾಜ್ ಸ್ಥಳದಲ್ಲೇ ಮೃತಪಟ್ಟಿದ್ದರಿಂದ ಬಾಲಕನ ಮೃತದೇಹವನ್ನು ಆಸ್ಪತ್ರೆಗೆ ತಂದು ಶಾಲಾ ಆಡಳಿತ ಮಂಡಳಿ ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.
ಇಂಡಿ ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


