ಬೆಂಗಳೂರಿನಲ್ಲಿ ಮೊದಲ ಕಂಬಳ ಆಯೋಜನೆ: ಭವ್ಯ ಮೆರವಣಿಗೆಯಲ್ಲಿ ಕೋಣಗಳ ಆಗಮನ
ಇದೇ ಮೊದಲ ಬಾರಿಗೆ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ನವೆಂಬರ್ 25 ಮತ್ತು 26 ರಂದು ‘ಬೆಂಗಳೂರು ಕಂಬಳ ನಮ್ಮ ಕಂಬಳ' ಶೀರ್ಷಿಕೆಯಡಿ ಕಂಬಳವನ್ನು ಆಯೋಜಿಸಲಾಗಿದ್ದು, ಕಂಬಳಕ್ಕೆ ಭವ್ಯ ಮೆರವಣಿಗೆ ಮೂಲಕ ಕೋಣಗಳು ಆಗಮಿಸಲಿವೆ ಎಂದು ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಹಾಗೂ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಬುಧವಾರ ಮಾಹಿತಿ ನೀಡಿದರು.

ಬೆಂಗಳೂರು: ಇದೇ ಮೊದಲ ಬಾರಿಗೆ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ನವೆಂಬರ್ 25 ಮತ್ತು 26 ರಂದು ‘ಬೆಂಗಳೂರು ಕಂಬಳ ನಮ್ಮ ಕಂಬಳ' ಶೀರ್ಷಿಕೆಯಡಿ ಕಂಬಳವನ್ನು ಆಯೋಜಿಸಲಾಗಿದ್ದು, ಕಂಬಳಕ್ಕೆ ಭವ್ಯ ಮೆರವಣಿಗೆ ಮೂಲಕ ಕೋಣಗಳು ಆಗಮಿಸಲಿವೆ ಎಂದು ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಹಾಗೂ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಬುಧವಾರ ಮಾಹಿತಿ ನೀಡಿದರು.
ನಗರದ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನ.23ರಂದು ಬೆಳಗ್ಗೆ 9 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಿಂದ ಹೊರಡುವ ಲಾರಿಗಳಲ್ಲಿ ಭವ್ಯ ಮೆರವಣಿಗೆ ಮೂಲಕ ಅರಮನೆ ಮೈದಾನಕ್ಕೆ ಕೋಣಗಳು ಆಗಮಿಸಲಿವೆ ಎಂದು ಹೇಳಿದರು.
ಸುಮಾರು 150 ಜೋಡಿ ಕೋಣಗಳನ್ನು ಹಾಸನದಲ್ಲಿ ಇರಿಸಲಾಗಿದ್ದು, ಶಾಸಕ ಹೆಚ್.ಡಿ.ರೇವಣ್ಣ ಮತ್ತಿತರರು ಮೇವು, ನೀರು, 2000 ಮಂದಿಗೆ ಊಟದ ವ್ಯವಸ್ಥೆ ಮಾಡುವುದಾಗಿ ಹೇಳಿದ್ದಾರೆ. ಹಾಸನದಿಂದ ನೆಲಮಂಗಲದವರೆಗೆ ಶುಕ್ರವಾರ ಅರಮನೆ ಮೈದಾನದವರೆಗೆ ಎಮ್ಮೆಗಳನ್ನು ಭವ್ಯ ಮೆರವಣಿಗೆ ಮೂಲಕ ಅರಮನೆ ಮೈದಾನಕ್ಕೆ ಕರೆ ತರಲಾಗುವುದು. ಈ ಸಂದರ್ಭದಲ್ಲಿ ಪಶು ವೈದ್ಯರ ತಂಡವೂ ಜೊತೆಯಲ್ಲಿ ಇರಲಿದ್ದಾರೆಂದು ಮಾಹಿತಿ ನೀಡಿದರು.
ಬೆಂಗಳೂರು ಕರಾವಳಿ ಕರ್ನಾಟಕದ 18 ಲಕ್ಷ ಜನರಿಗೆ ನೆಲೆಯಾಗಿದೆ. ಅವರಲ್ಲಿ ಸುಮಾರು ಎಂಟು ಲಕ್ಷ ಜನರು ಎರಡು ದಿನಗಳ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಗಳಿವೆ. ಕಂಬಳದ ವೇಳೆ ಆಹಾರ, ಕಲಾಕೃತಿಗಳು ಮತ್ತು ಇತರ ವಸ್ತುಗಳ 150 ಕ್ಕೂ ಹೆಚ್ಚು ಮಳಿಗೆಗಳನ್ನು ಹಾಕಲಾಗುತ್ತದೆ.
ಸಮಿತಿಯ ಗೌರವಾಧ್ಯಕ್ಷ ಪ್ರಕಾಶ್ ಶೆಟ್ಟಿ ಮಾತನಾಡಿ, ಬೆಂಗಳೂರಿನ 65 ಸಂಘ ಸಂಸ್ಥೆಗಳು ಈ ಅದ್ಧೂರಿ ಕಾರ್ಯಕ್ರಮಕ್ಕೆ ಬೆಂಬಲ ನೀಡುತ್ತಿವೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


