ಶಿಕ್ಷಣ ಸಚಿವರ ಜಿಲ್ಲೆಯಲ್ಲೊಂದು ಅಮಾನುಷ ಘಟನೆ: ಬ್ರಾಹ್ಮಣ ವಿದ್ಯಾರ್ಥಿನಿಗೆ ಬಲವಂತವಾಗಿ ಮೊಟ್ಟೆ ತಿನ್ನಿಸಿದ ಶಿಕ್ಷಕ!
ಸರ್ಕಾರಿ ಶಾಲೆಯಲ್ಲಿ 2ನೇ ತರಗತಿ ವಿದ್ಯಾರ್ಥಿನಿಗೆ ಶಿಕ್ಷಕರೊಬ್ಬರು ಶಾಲೆಯಲ್ಲಿ ಬಲವಂತವಾಗಿ ಮೊಟ್ಟೆ ತಿನ್ನಿಸಿದ ಆರೋಪ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅಮೃತ ಗ್ರಾಮದಲ್ಲಿ ಕೇಳಿಬಂದಿದೆ.

ಶಿವಮೊಗ್ಗ: ಸರ್ಕಾರಿ ಶಾಲೆಯಲ್ಲಿ 2ನೇ ತರಗತಿ ವಿದ್ಯಾರ್ಥಿನಿಗೆ ಶಿಕ್ಷಕರೊಬ್ಬರು ಶಾಲೆಯಲ್ಲಿ ಬಲವಂತವಾಗಿ ಮೊಟ್ಟೆ ತಿನ್ನಿಸಿದ ಆರೋಪ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅಮೃತ ಗ್ರಾಮದಲ್ಲಿ ಕೇಳಿಬಂದಿದೆ.
ಬ್ರಾಹ್ಮಣ ವಿದ್ಯಾರ್ಥಿನಿಗೆ ಶಿಕ್ಷಕರೊಬ್ಬರು ಬಲವಂತವಾಗಿ ಮೊಟ್ಟೆ ತಿನ್ನಿಸಿ ನಂತರ ಶಹಬ್ಬಾಶ್ ಗಿರಿ ಕೊಟ್ಟು ಚಪ್ಪಾಳೆ ತಟ್ಟಿಸಿದ್ದಾರೆ ಎಂದು ತಿಳಿದು ಬಂದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅಮೃತ ಗ್ರಾಮದ ಕೆಪಿಎಸ್ ಪ್ರಾಥಮಿಕ ಶಾಲೆಯಲ್ಲಿ ಬ್ರಾಹ್ಮಣ ವಿದ್ಯಾರ್ಥಿನಿಗೆ ಶಿಕ್ಷಕರೊಬ್ಬರು ಮೊಟ್ಟೆ ತಿನ್ನಿಸಿದ್ದಕ್ಕೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದರಿಂದ ವಿದ್ಯಾರ್ಥಿನಿಯ ಆರೋಗ್ಯ ಏರುಪೇರಾಗಿದ್ದು, ಇದರಿಂದ ಧಾರ್ಮಿಕ ಆಚರಣೆಗೆ ಧಕ್ಕೆಯಾಗಿರುತ್ತದೆ ಎಂದು ಪೋಷಕರಾದ ಶ್ರೀಕಾಂತ್ ಆರೋಪಿಸಿದ್ದಾರೆ. ಮೊಟ್ಟೆ ತಿನ್ನಲು ಬಲವಂತ ಮಾಡಿದ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳಲು ಶ್ರೀಕಾಂತ್ ಆಗ್ರಹಿಸಿದ್ದಾರೆ.
ಇಂತಹ ಘಟನೆಗಳು ಮಕ್ಕಳ ಮನಸ್ಸಿನ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಆದ್ದರಿಂದ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿನಿಯ ತಂದೆ ಶ್ರೀಕಾಂತ್ ಸ್ಥಳೀಯ ಶಾಸಕ ಆರಗ ಜ್ಞಾನೇಂದ್ರ ಹಾಗೂ ಡಿಡಿಪಿಐ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


