ಅನಾಥಾಶ್ರಮದ ವಿರುದ್ಧ ಟೀಕೆ: ಎನ್‌ಸಿಪಿಸಿಆರ್ ಮುಖ್ಯಸ್ಥರ ವಿರುದ್ಧ ಕೇಸ್ ದಾಖಲು
ದಾರುಲ್ ಉಲೂಮ್ ಸಯೀದಿಯಾ ಯತೀಂಖಾನಾದಲ್ಲಿ (ಅನಾಥಾಶ್ರಮ) ಮಕ್ಕಳು “ಮಧ್ಯಕಾಲೀನ ತಾಲಿಬಾನ್ ಜೀವನ ನಡೆಸುತ್ತಿದ್ದಾರೆ” ಎಂಬ ಹೇಳಿಕೆಗಾಗಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (ಎನ್‌ಸಿಪಿಸಿಆರ್) ಅಧ್ಯಕ್ಷ ಪ್ರಿಯಾಂಕ್ ಕಾನೂಂಗೊ ವಿರುದ್ಧ ದೇವರಜೀವನಹಳ್ಳಿ (ಡಿಜೆ ಹಳ್ಳಿ) ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಬೆಂಗಳೂರು: ದಾರುಲ್ ಉಲೂಮ್ ಸಯೀದಿಯಾ ಯತೀಂಖಾನಾದಲ್ಲಿ (ಅನಾಥಾಶ್ರಮ) ಮಕ್ಕಳು “ಮಧ್ಯಕಾಲೀನ ತಾಲಿಬಾನ್ ಜೀವನ ನಡೆಸುತ್ತಿದ್ದಾರೆ” ಎಂಬ ಹೇಳಿಕೆಗಾಗಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (ಎನ್‌ಸಿಪಿಸಿಆರ್) ಅಧ್ಯಕ್ಷ ಪ್ರಿಯಾಂಕ್ ಕಾನೂಂಗೊ ವಿರುದ್ಧ ದೇವರಜೀವನಹಳ್ಳಿ (ಡಿಜೆ ಹಳ್ಳಿ) ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕಾವಲ್ ಬೈರಸಂದ್ರದ ದಾರುಲ್ ಉಲೂಮ್ ಸಯೀದಿಯಾ ಯತೀಂಖಾನ ಕಾರ್ಯದರ್ಶಿ ಅಶ್ರಫ್ ಖಾನ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.
ಖಾನ್ ಅವರ ಅನಾಥಾಶ್ರಮಕ್ಕೆ ಇತ್ತೀಚೆಗೆ ಭೇಟಿ ನೀಡಿದ್ದ ಕಾನೂಂಗೊ ಯಾವುದೇ ಅನುಮತಿಯನ್ನು ಪಡೆದಿಲ್ಲ. ಇದಲ್ಲದೆ, ಅನಾಥಾಶ್ರಮದಲ್ಲಿ ಮಕ್ಕಳಿಗೆ ಯಾವುದೇ ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತಿಲ್ಲ ಎಂದು ಹೇಳಿದ್ದಾರೆ. ಸಮುದಾಯಗಳ ನಡುವೆ ಬಿರುಕು ಮೂಡಿಸಲು ಕಾನೂಂಗೊ ತನ್ನ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮೂಲಕ ಸುಳ್ಳು ಮಾಹಿತಿಯನ್ನು ಹರಡಿದ್ದಾರೆ ಎಂದು ಅಶ್ರಫ್ ಖಾನ್ ಆರೋಪಿಸಿದ್ದಾರೆ.
ಆರಂಭದಲ್ಲಿ ಅನಾಥಾಶ್ರಮದ ಸೌಲಭ್ಯಗಳಿಗಾಗಿ ಶ್ಲಾಘಿಸಿ, ಅದರ ಅಭಿವೃದ್ಧಿಗೆ ಆರ್ಥಿಕ ನೆರವು ನೀಡುವ ಭರವಸೆ ನೀಡಿದ್ದ ಕಾನೂಂಗೊ ತದನಂತರ ಸಾಮಾಜಿಕ ಮಾಧ್ಯಮದಲ್ಲಿ ಕೆಲವು ನಿರಾಶಾದಾಯಕ ಕಾಮೆಂಟ್‌ಗಳನ್ನು ಮಾಡಿದ್ದರು.
ನವೆಂಬರ್ 19 ರಂದು ಎನ್‌ಸಿಪಿಸಿಆರ್‌ನ ಕೆಲವು ಸದಸ್ಯರೊಂದಿಗೆ ಅನಾಥಾಶ್ರಮಕ್ಕೆ ಭೇಟಿ ಪರಿಶೀಲಿಸಿದ ಕಾನೊಂಗೊ, ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ಅನಾಥಾಶ್ರಮ ನೋಂದಾಯಿತ ಸಂಸ್ಥೆ ಅಲ್ಲ ಮತ್ತು ಮೂಲಭೂತ ಸೌಕರ್ಯಗಳ ಕೊರತೆ ಹೊಂದಿದೆ ಎಂದು ಹೇಳಿದೆ.
ಮಕ್ಕಳ ಆರೈಕೆ ಮತ್ತು ರಕ್ಷಣೆ ಕಾಯ್ದೆಯಡಿ ಅನಾಥಾಶ್ರಮದ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಆಯೋಗ ಒತ್ತಾಯಿಸಿದೆ. ಜಿಲ್ಲಾಧಿಕಾರಿ ದಯಾನಂದ ಕೆಎ ಅವರಿಗೆ ಪತ್ರದ ಪ್ರತಿಯನ್ನು ಹಸ್ತಾಂತರಿಸಿರುವ ಆಯೋಗ, ಅನಾಥಾಶ್ರಮದ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಆಗ್ರಹಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


