ಧಾರವಾಡ: ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ 10ನೇ ತರಗತಿ ವಿದ್ಯಾರ್ಥಿ ಸಾವು!
ಆಟ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಧಾರವಾಡದ ಮದಿಹಾಳ ಬಡಾವಣೆಯಲ್ಲಿ ಶುಕ್ರವಾರ ನಡೆದಿದೆ. ಶ್ರೇಯಸ್ ಸಿನ್ನೂರು (16) ಮೃತ ಬಾಲಕ.

ಧಾರವಾಡ: ಆಟ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಧಾರವಾಡದ ಮದಿಹಾಳ ಬಡಾವಣೆಯಲ್ಲಿ ಶುಕ್ರವಾರ ನಡೆದಿದೆ. ಶ್ರೇಯಸ್ ಸಿನ್ನೂರು (16) ಮೃತ ಬಾಲಕ.
ವಿದ್ಯುತ್ ತಂತಿ ತಗುಲಿದ ತಕ್ಷಣ ಬಿಡಿಸಲು ಹೋಗಿದ್ದ ಮತ್ತೋರ್ವ ಬಾಲಕ ಗಾಯಗೊಂಡಿದ್ದಾರೆ. ಶ್ರೇಯಸ್ ಸ್ನೇಹಿತ ಪ್ರಣವ್ ಕೈಗೆ ಗಾಯವಾಗಿದೆ. ಸಂಜೆ ವೇಳೆ ಮನೆಯ ಮೇಲೆ ಹತ್ತಿದ ಬಾಲಕ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದು, ಇನ್ನು ಗಾಯಗೊಂಡ ಪ್ರಣವ್ನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಧಾರವಾಡ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಸಂಜೆ 5ಕ್ಕೆ ಶಾಲೆಯಿಂದ ಬಂದು ಮನೆಯಲ್ಲಿ ಮೊಬೈಲ್ ಹಿಡಿದು ಕುಳಿತಿದ್ದ, ಆಗ ಆಟ ಆಡಲು ಗೆಳೆಯ ಕರೆದಿದ್ದಾನೆ. ಆಗ ಹೊರಗೆ ಹೋಗಿದ್ದಾನೆ. ಇಬ್ಬರೂ ಪ್ರತಿದಿನ ಸಂಜೆ ಆಟ ಆಡುತ್ತಿದ್ದರು. ಚೆಂಡು ತೆಗೆದುಕೊಂಡು ಹೋಗಿದ್ದ ಆತ, ಹೋದ ಹತ್ತೇ ನಿಮಿಷದಲ್ಲಿ ಮಗ ಬಿದ್ದಿದ್ದಾನೆಂದು ಎಂದು ಕರೆದರು ಎಂದು ಘಟನೆ ಬಗ್ಗೆ ಶ್ರೇಯಸ್ ತಂದೆ ವಿವರಿಸಿದ್ದಾರೆ.
ಓಡಿ ಹೋಗಿ ನೋಡಿದಾಗ ವಿದ್ಯುತ್ ತಗುಲಿತ್ತು. ಮನೆ ಬಳಿ ಕಟ್ಟಡ ಕಾಮಗಾರಿ ನಡೆದಿದೆ. ಅಲ್ಲಿ ಆಟ ಆಡುತ್ತಿದ್ದರು. ಗೆಳೆಯ ಎಸೆದ ಬಾಲು ಹಿಡಿಯಲು ಹೋದಾಗ ವಿದ್ಯುತ್ ತಗುಲಿದೆ. ಕೈಯಿಂದ ಹೊಟ್ಟೆಯವರೆಗೆ ವಿದ್ಯುತ್ ಶಾಕ್ ಹೊಡೆದಿತ್ತು. ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದೇವೆ. ನಾನು ವೈದ್ಯರ ಕಾಲಿಗೂ ಬಿದ್ದು, ಮಗನನ್ನು ಉಳಿಸಿಕೊಡುವಂತೆ ಕೇಳಿದೆ.
ಆದರೆ ಮಗ ಉಳಿಯಲಿಲ್ಲ. ಮಗ ನಗರದ ರಾಜೀವ್ ಗಾಂಧಿ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಓದುತ್ತಿದ್ದ. ಆತನನ್ನು ಉಳಿಸಲು ಇನ್ನೋರ್ವ ಬಾಲಕ ಪ್ರಯತ್ನ ಪಟ್ಟಿದ್ದಾನೆ. ಆತನಿಗೂ ಗಾಯವಾಗಿದೆ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೇಯಸ್ ನನಗೆ ಒಬ್ಬನೇ ಮಗ ಎಂದು ಗೋಳಾಡಿದರು. ಈ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


