ಬೆಂಗಳೂರು: ಲಂಚ ಪಡೆಯುತ್ತಿದ್ದ ಬೆಸ್ಕಾಂ, ಕೆಐಎಡಿಬಿ ಅಧಿಕಾರಿಗಳು ಲೋಕಾಯುಕ್ತ ಬಲೆಗೆ
ವಿದ್ಯುತ್ ಸಂಪರ್ಕ ಬದಲಾವಣೆ ಮಾಡಲು ರೂ.7.50 ಲಕ್ಷ ಲಂಚ ಪಡೆಯುತ್ತಿದ್ದ ಆರೋಪದಡಿ ಬೆಸ್ಕಾಂ ಮುಖ್ಯ ಪ್ರಧಾನ ವ್ಯವಸ್ಥಾಪಕ ಎಂ.ಎಲ್. ನಾಗರಾಜ್ ಹಾಗೂ ಕಾರು ಚಾಲಕ ಮುರುಳಿಕೃಷ್ಣ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ವಿದ್ಯುತ್ ಸಂಪರ್ಕ ಬದಲಾವಣೆ ಮಾಡಲು ರೂ.7.50 ಲಕ್ಷ ಲಂಚ ಪಡೆಯುತ್ತಿದ್ದ ಆರೋಪದಡಿ ಬೆಸ್ಕಾಂ ಮುಖ್ಯ ಪ್ರಧಾನ ವ್ಯವಸ್ಥಾಪಕ ಎಂ.ಎಲ್. ನಾಗರಾಜ್ ಹಾಗೂ ಕಾರು ಚಾಲಕ ಮುರುಳಿಕೃಷ್ಣ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
‘ಬೆಸ್ಕಾಂ ಕಾರ್ಯಾಚರಣೆ (ಎಲೆಕ್ಟ್ರಿಕಲ್) ವಿಭಾಗದ ಎಂ.ಎಲ್. ನಾಗರಾಜ್ ಪರವಾಗಿ ಚಾಲಕ ಮುರುಳಿಕೃಷ್ಣ ರೂ.7.50 ಲಕ್ಷ ಲಂಚ ಪಡೆಯುತ್ತಿದ್ದರು. ಅದೇ ಸಂದರ್ಭದಲ್ಲಿ ದಾಳಿ ಮಾಡಿ ಪುರಾವೆ ಸಮೇತ ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದರು.
‘ವಿದ್ಯುತ್ ಗುತ್ತಿಗೆದಾರ ಬಿ.ಎನ್. ಪ್ರತಾಪ್ ಅವರು ವಿದ್ಯುತ್ ಸಂಪರ್ಕವೊಂದನ್ನು ವಾಣಿಜ್ಯ ಬಳಕೆಯಿಂದ ಕೈಗಾರಿಕೆ ಬಳಕೆಗೆ ಬದಲಾವಣೆ ಮಾಡಲು ಕೋರಿದ್ದರು. ನಾಗರಾಜ್, ಲಂಚಕ್ಕೆ ಬೇಡಿಕೆ ಇರಿಸಿದ್ದರು. ಬೇಸತ್ತ ಪ್ರತಾಪ್ ಅವರು ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು. ಅದರನ್ವಯ ನಾಗರಾಜ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು’ ಎಂದು ಹೇಳಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಲಂಚ ಪಡೆಯುತ್ತಿದ್ದಾಗ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಸಹಾಯಕ ಕಾರ್ಯಪಾಲಕ ಎಂಜಿನಿಯರ್ (ಎಇಇ) ಮತ್ತು ಸಹಾಯಕ ಎಂಜಿನಿಯರ್ (ಎಇ) ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.
ನಿರ್ಮಾಣ ಹಂತದಲ್ಲಿರುವ ಕೈಗಾರಿಕಾ ಯೋಜನೆಗೆ ಅನುಮೋದನೆ ನೀಡಲು ಎಇಇ ನವೀನ್ ತೋಟಗಂಟಿ ಮತ್ತು ಎಇ ಮಲ್ಲಾಪುರ ಜಿಎಚ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಗುರುವಾರ 1.2 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರನ್ನು ಬಂಧಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


