ಬೆಂಗಳೂರು: ಟ್ರಾನ್ಸ್‌ಫಾರ್ಮರ್ ಸರಿಪಡಿಸುತ್ತಿದ್ದಾಗ ವಿದ್ಯುತ್ ಪ್ರವಹಿಸಿ ಬೆಸ್ಕಾಂ ಲೈನ್ಮ್ಯಾನ್ ಸಾವು
ಟ್ರಾನ್ಸ್‌ಫಾರ್ಮರ್ ಸರಿಪಡಿಸುತ್ತಿದ್ದಾಗ ವಿದ್ಯುತ್ ಪ್ರವಹಿಸಿ ಬೆಸ್ಕಾಂ ಲೈನ್ಮ್ಯಾನ್ ಒಬ್ಬರು ಮೃತಪಟ್ಟಿರುವ ಘಟನೆ ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಗಳೂರು ಹೊರವಲಯದ ಚೀಮಸಂದ್ರದಲ್ಲಿ ಶನಿವಾರ ನಡೆದಿದೆ.

ಬೆಂಗಳೂರು: ಟ್ರಾನ್ಸ್‌ಫಾರ್ಮರ್ ಸರಿಪಡಿಸುತ್ತಿದ್ದಾಗ ವಿದ್ಯುತ್ ಪ್ರವಹಿಸಿ ಬೆಸ್ಕಾಂ ಲೈನ್ಮ್ಯಾನ್ ಒಬ್ಬರು ಮೃತಪಟ್ಟಿರುವ ಘಟನೆ ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಗಳೂರು ಹೊರವಲಯದ ಚೀಮಸಂದ್ರದಲ್ಲಿ ಶನಿವಾರ ನಡೆದಿದೆ.
ಸಿದ್ದರಾಜು (42) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಚೀಮಸಂದ್ರದಲ್ಲಿ ಟ್ರಾನ್ಸ್‌ಫಾರ್ಮರ್ ಅನ್ನು ಸರಿಪಡಿಸುತ್ತಿದ್ದಾಗ ಬೆಳಿಗ್ಗೆ 10.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್‌ಪಿ ಮಲ್ಲಿಕಾರ್ಜುನ ಬಲದಂಡಿ ಅವರು ಮಾಹಿತಿ ನೀಡಿದ್ದಾರೆ.
ಹೊಸಕೋಟೆ ಮೂಲದ ಸಿದ್ದರಾಜು ಅವರು ಪತ್ನಿ, ಮಕ್ಕಳು, ಸಹೋದರನನ್ನು ಅಗಲಿದ್ದಾರೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ನಿರ್ಲಕ್ಷ್ಯದ ಮೂಲ ಕಾರಣ ತಿಳಿಸಿಯಲು ಬೆಸ್ಕಾಂನೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


