ಕರ್ತವ್ಯಲೋಪ: ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಅಮಾನತು
ಕರ್ತವ್ಯಲೋಪ ಎಸಗಿದ ಹಿನ್ನೆಲೆಯಲ್ಲಿ ಕಲಬುರಗಿಯ ಸರ್ಕಾರಿ ಪ್ರೌಢಶಾಲೆಯ ಪ್ರಭಾರಿ ಮುಖ್ಯೋಪಾಧ್ಯಾಯರನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಡಿಡಿಪಿಐ) ಅಮಾನತುಗೊಳಿಸಿದ್ದಾರೆ.

ಕಲಬುರಗಿ: ಕರ್ತವ್ಯಲೋಪ ಎಸಗಿದ ಹಿನ್ನೆಲೆಯಲ್ಲಿ ಕಲಬುರಗಿಯ ಸರ್ಕಾರಿ ಪ್ರೌಢಶಾಲೆಯ ಪ್ರಭಾರಿ ಮುಖ್ಯೋಪಾಧ್ಯಾಯರನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಡಿಡಿಪಿಐ) ಅಮಾನತುಗೊಳಿಸಿದ್ದಾರೆ.
ಮೇಲಧಿಕಾರಿಗಳ ಗಮನಕ್ಕೆ ತಾರದೆ ಶಾದಿಪುರ ಸರಕಾರಿ ಪ್ರೌಢಶಾಲೆಯ ಪ್ರಭಾರಿ ಮುಖ್ಯೋಪಾಧ್ಯಾಯ ಸಾಬಣ್ಣ ರಜೆ ಮೇಲೆ ತೆರಳಿದ್ದರು. ಅಲ್ಲದೆ, ಮಧ್ಯಾಹ್ನದ ಊಟವನ್ನು ಸರಿಯಾಗಿ ವಿತರಿಸದ ಮತ್ತು ಹಣಕಾಸಿನ ವ್ಯವಹಾರ ನಿರ್ವಹಣೆ ಮಾಡದ ಆರೋಪಗಳೂ ಕೂಡ ಇವರ ಮೇಲೆ ಕೇಳಿಬಂದಿತ್ತು.
ಈ ಸಂಬಂಧ ಇಲಾಖಾ ವಿಚಾರಣೆ ಬಾಕಿಯಿದ್ದು, ಈ ನಡುವಲ್ಲೇ ಸಾಬಣ್ಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಅಮಾನತು ಆದೇಶದಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


