ರಾಜ್ಯ

ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನ್ಯಾ. ನಾರಾಯಣಸ್ವಾಮಿ, ಸದಸ್ಯರಾಗಿ ಶ್ಯಾಮ್ ಭಟ್ ನೇಮಕ

ಕಳೆದ 8 ತಿಂಗಳಿಂದ ಖಾಲಿ ಇದ್ದ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ನಿವೃತ್ತ ನ್ಯಾಯಮೂರ್ತಿ ಎಲ್​. ನಾರಾಯಣಸ್ವಾಮಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.

ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನ್ಯಾ. ನಾರಾಯಣಸ್ವಾಮಿ, ಸದಸ್ಯರಾಗಿ ಶ್ಯಾಮ್ ಭಟ್ ನೇಮಕ
ವಿಧಾನಸೌಧ
Published On :

ಬೆಂಗಳೂರು: ಕಳೆದ 8 ತಿಂಗಳಿಂದ ಖಾಲಿ ಇದ್ದ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ನಿವೃತ್ತ ನ್ಯಾಯಮೂರ್ತಿ ಎಲ್​. ನಾರಾಯಣಸ್ವಾಮಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.

ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಅಧ್ಯಕ್ಷರ ಜೊತೆಗೆ ಇಬ್ಬರು ಸದಸ್ಯರನ್ನು ಸಹ ರಾಜ್ಯ ಸರ್ಕಾರ ನೇಮಕ ಮಾಡಿದ್ದು, ನಿವೃತ್ತ ಜಿಲ್ಲಾ ನ್ಯಾಯದೀಶ ಎಸ್. ಕೆ.ವಂಟಿಗೋಡಿ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಶ್ಯಾಮ್ ಭಟ್ ಅವರನ್ನು ಸದಸ್ಯರನ್ನಾಗಿ ನೇಮಿಸಿದೆ.

ನೂತನ ಅಧ್ಯಕ್ಷರು ಹಾಗೂ ಸದಸ್ಯರು ಐದು ವರ್ಷ ಅಥವಾ 70 ವರ್ಷ ವಯಸ್ಸಾಗುವವರೆಗೆ ಈ ಎರಡರಲ್ಲಿ ಯಾವುದು ಮೊದಲೇ ಅಲ್ಲಿಯವರೆಗೆ ಅಧಿಕಾರವಧಿಯನ್ನು ಹೊಂದಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನವರಾದ ಎಲ್ ನಾರಾಯಣಸ್ವಾಮಿ ಅವರು ಹಿಮಾಚಲ ಪ್ರದೇಶ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ, ಕರ್ನಾಟಕ ಹೈಕೋರ್ಟ್ ಹೆಚ್ಚವರಿ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದಾರೆ.

ರಾಜ್ಯ ಮಾನವ ಹಕ್ಕುಗಳ ಆಯೋಗದಲ್ಲಿ ಸುಮಾರು 4,800ಕ್ಕೂ ಅಧಿಕ ಪ್ರಕರಣಗಳು ತನಿಖೆಯಾಗದೆ ಬಾಕಿ ಉಳಿದಿವೆ. ಈಗ ಅಧ್ಯಕ್ಷರು ಆಯ್ಕೆಯಾಗಿದ್ದರಿಂದ ತನಿಖೆ ಮುಂದುವರೆಯಲಿವೆ.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.