ರಾಜ್ಯ

ಮೀಟರ್ ಬಡ್ಡಿ ವ್ಯವಹಾರ ನಡೆಸುವವರ ವಿರುದ್ಧ ಕಾನೂನು ಕ್ರಮ: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಮೀಟರ್ ಬಡ್ಡಿ ವ್ಯವಹಾರ ನಡೆಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಸೋಮವಾರ ಹೇಳಿದ್ದಾರೆ.

ಮೀಟರ್ ಬಡ್ಡಿ ವ್ಯವಹಾರ ನಡೆಸುವವರ ವಿರುದ್ಧ ಕಾನೂನು ಕ್ರಮ: ಗೃಹ ಸಚಿವ ಡಾ.ಜಿ.ಪರಮೇಶ್ವರ್
ಗೃಹ ಸಚಿವ ಡಾ.ಜಿ.ಪರಮೇಶ್ವರ್
Published On :

ತುಮಕೂರು: ಮೀಟರ್ ಬಡ್ಡಿ ವ್ಯವಹಾರ ನಡೆಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಸೋಮವಾರ ಹೇಳಿದ್ದಾರೆ.

ಮೀಟರ್ ಬಡ್ಡಿ ವ್ಯವಹಾರ ಕಿರುಕುಳದಿಂದಾಗಿ ತುಮಕೂರಿನಲ್ಲಿ ನಿನ್ನೆ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆಗೂ ಮುನ್ನ ಕರೀಬ್ ಸಾಬ್ ಎಂಬುವವರು ಡೆತ್ ನೋಟ್ ಬರೆದಿಟ್ಟಿದ್ದರು.

ಇದರಂತೆ ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ಇಂದು ಗೃಹ ಸಚಿವ ಪರಮೇಶ್ವರ್ ಅವರು ಭೇಟಿ ನೀಡಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರೀಬ್ ಸಾಬ್ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದ ಐದು ಜನರನ್ನು ವಶಕ್ಕೆ ಪಡೆಯಲಾಗಿದೆ. ಆತ್ಮಹತ್ಯೆಯ ಹಿಂದೆ ಬಡ್ಡಿ ವ್ಯವಹಾರ ಇದೆ ಎಂದು ಜನರು ಮಾತನಾಡುತ್ತಿದ್ದಾರೆ. ಅದನ್ನು ಗಂಭೀರವಾಗಿ ತೆಗದುಕೊಂಡು, ಬಡ್ಡಿ ವ್ಯವಹಾರವನ್ನು ನಿಲ್ಲಿಸಲು ಕ್ರಮ ತೆಗೆದುಕೊಳ್ಳುತ್ತೇವೆ. ಬಡ್ಡಿ ವ್ಯವಹಾರ ಮಾಡುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳುತ್ತೇವೆ. ತನಿಖೆಯ ನಂತರ ಆತ್ಮಹತ್ಯೆಗೆ ಕಾರಣ ಏನು ಎಂಬುವುದು ತಿಳಿಯಲಿದೆ ಎಂದು ಹೇಳಿದರು.

ನಗರ ಮತ್ತು ಜಿಲ್ಲೆಯಲ್ಲಿ ಅಮಾಯಕರಿಗೆ ಸಾಲ ಕೊಟ್ಟು ಬಡ್ಡಿ ಪಡೆಯುವುದು ಜಾಸ್ತಿಯಾಗಿದೆ. ಮೀಟರ್ ಬಡ್ಡಿ ಮಾಡುವರ, ದಂಧೆ ನಡೆಸುವವರ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ. ಇಂತಹ ಘಟನೆ ಮರುಕಳಿಸಬಾರದು. ಇದನ್ನು ತಡೆಯುವಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.