ಚಿಕ್ಕೋಡಿ: ಅಥಣಿಯಲ್ಲಿ ವಿದ್ಯುತ್ ಸ್ಪರ್ಶಿಸಿ ತಂದೆ-ಮಗ ದಾರುಣ ಸಾವು
ವಿದ್ಯುತ್ ಪ್ರವಹಿಸಿ ತಂದೆ-ಮಗ ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದಲ್ಲಿ ನಡೆದಿದೆ. ಬೋರವೆಲ್ ವಾಟರ್ ವಾಲ್ವ್ ತಿರುಗಿಸುವ ವೇಳೆ ವಿದ್ಯುತ್ ಸ್ಪರ್ಶಿಸಿದ್ದರಿಂದ ಅವಘಡ ನಡೆದಿದೆ.

ಚಿಕ್ಕೋಡಿ: ವಿದ್ಯುತ್ ಪ್ರವಹಿಸಿ ತಂದೆ-ಮಗ ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದಲ್ಲಿ ನಡೆದಿದೆ. ಬೋರವೆಲ್ ವಾಟರ್ ವಾಲ್ವ್ ತಿರುಗಿಸುವ ವೇಳೆ ವಿದ್ಯುತ್ ಸ್ಪರ್ಶಿಸಿದ್ದರಿಂದ ಅವಘಡ ನಡೆದಿದೆ.
ಮಲ್ಲಿಕಾರ್ಜುನ ಸದಾಶಿವ ಪೂಜಾರಿ (32), ಪ್ರೀತಮ್ ಮಲ್ಲಿಕಾರ್ಜುನ ಪೂಜಾರಿ (7) ಮೃತರು. ತಂದೆಗೆ ವಿದ್ಯುತ್ ತಗುಲಿದ್ದನ್ನು ನೋಡಿ ಮಗ ರಕ್ಷಣೆಗೆ ಬಂದಾಗ ಆತನಿಗೂ ವಿದ್ಯುತ್ ಪ್ರವಹಿಸಿದೆ, ಇದರಿಂದ ಸ್ಥಳದಲ್ಲಿ ತಂದೆ-ಮಗ ಕೊನೆಯುಸಿರೆಳೆದಿದ್ದಾರೆ. ಘಟನಾ ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ಅರಣ್ಯಾಧಿಕಾರಿಗಳಿಂದ ಮಹಿಳೆ ಕೊಂದ ಹುಲಿ ಸೆರೆ
ದುರಂತವೆಂದರೆ, ಪೂಜಾರಿ ಅವರಿಗೆ ಇಬ್ಬರು ಪುತ್ರರಿದ್ದು, ಅವರಲ್ಲಿ ಒಬ್ಬ ಮಗ ಕೆಲವೇ ತಿಂಗಳ ಹಿಂದೆ ನಿಧನರಾದರು. ಭಾನುವಾರದಂದು ಪೂಜಾರಿ ಮತ್ತು ಪ್ರೀತಂ ಅವರ ಸಾವು ಕುಟುಂಬಕ್ಕೆ ದೊಡ್ಡ ಆಘಾತವನ್ನುಂಟು ಮಾಡಿದೆ. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


