ಕೋಲಾರ ಲಾಕಪ್ ಡೆತ್ ಪ್ರಕರಣ: ನಂಗಲಿ ಪಿಎಸ್‌ಐ ಸೇರಿ ಮೂವರ ಅಮಾನತು
ಲಾಕಪ್ ಡೆತ್ ಪ್ರಕರಣವೊಂದರಲ್ಲಿ ಪಿಎಸ್‌ಐ ಸೇರಿ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದ್ದು, ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಕೋಲಾರ: ಲಾಕಪ್ ಡೆತ್ ಪ್ರಕರಣವೊಂದರಲ್ಲಿ ಪಿಎಸ್‌ಐ ಸೇರಿ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದ್ದು, ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆಂದು ಕರೆತಂದಿದ್ದ ಆರೋಪಿಯೊಬ್ಬರು ಅಕ್ಟೋಬರ್ 1ರಂದು ಸಾವನ್ನಪ್ಪಿದ್ದರು. ಪ್ರಕರಣದಲ್ಲಿ ಠಾಣೆಯ ಪಿಎಸ್‌ಐ ಪ್ರದೀಪ್ ಸಿಂಗ್ ಹಾಗೂ ಪೊಲೀಸ್ ಪೇದೆ ಮಂಜುನಾಥ್, ಮಹಾಂತೇಶ್ ಪೂಜಾರಿ ಎಂಬವರನ್ನು ಅಮಾನತು ಮಾಡಲಾಗಿದೆ.
ಕಳ್ಳತನ ಪ್ರಕರಣದಲ್ಲಿ ಆಂಧ್ರಪ್ರದೇಶದ ಮದನಪಲ್ಲಿ ಮೂಲದ ಮುನಿರಾಜು ಮತ್ತು ಬಾಲಾಜಿ ಎಂಬ ಯುವಕರನ್ನು ವಿಚಾರಣೆಗೆಂದು ಸೆಪ್ಟೆಂಬರ್ 17ರಂದು ಠಾಣೆಗೆ ಕರೆತಂದಿದ್ದರು. ಅವರನ್ನು ಹಿರಿಯ ಅಧಿಕಾರಿಗಳ ಗಮನಕ್ಕೂ ತಾರದೆ, ಬೇರೆ-ಬೇರೆ ಸ್ಥಳಗಳಲ್ಲಿ ಇರಿಸಿ, 15 ದಿನಗಳ ಕಾಲ ವಿಚಾರಣೆಗೆ ಒಳಪಡಿಸಿದ್ದರು.
ಆದರೆ, ಅಕ್ಟೋಬರ್ 1ರಂದು ಪೊಲೀಸ್ ಸುಪರ್ದಿಯಲ್ಲೇ ಮುನಿರಾಜು ಎಂಬವರು ಸಾವನ್ನಪ್ಪಿದ್ದರು. ಬಳಿಕ, ಪ್ರಕರಣವನ್ನು ತನಿಖೆಗೆ ಆದೇಶಿಸಲಾಗಿತ್ತು. ಇಲಾಖೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಾರದೆ ಅರೋಪಿಗಳನ್ನ ವಿಚಾರಣೆ ಮಾಡಿ, ಕರ್ತವ್ಯ ಲೋಪ ಎಸಗಿದ್ದಾರೆ ಎಂಬ ಆರೋಪದ ಮೇಲೆ ಮೂವರನ್ನು ಅಮಾನತು ಮಾಡಿ ಕೋಲಾರ ಎಸ್‌ಒಇ ನಾರಾಯಣ ಅಮಾನತು ಮಾಡಿದ್ದಾರೆ. ಮೂವರ ವಿರುದ್ಧವೂ ಎಫ್‌ಐಆರ್ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


