ದರೋಡೆಗೆ ಯತ್ನಿಸಿ ನೇಪಾಳಿ ವ್ಯಕ್ತಿಯ ಹತ್ಯೆ: 8 ಮಂದಿ ಆರೋಪಿಗಳ ಬಂಧನ
ದರೋಡೆಗೆ ಯತ್ನಿಸಿ ನೇಪಾಳಿ ಮೂಲಕ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಿದ್ದ 8 ಮಂದಿ ಆರೋಪಿಗಳನ್ನು ಆರ್‌ಎಂಸಿ ಯಾರ್ಡ್ ಪೊಲೀಸರು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: ದರೋಡೆಗೆ ಯತ್ನಿಸಿ ನೇಪಾಳಿ ಮೂಲಕ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಿದ್ದ 8 ಮಂದಿ ಆರೋಪಿಗಳನ್ನು ಆರ್‌ಎಂಸಿ ಯಾರ್ಡ್ ಪೊಲೀಸರು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ.
ಆರೋಪಿಗಳನ್ನು ಟಿ ಚಂದ್ರು (23), ಸಚಿನ್ (19), ಕಿರಣ್ ಕುಮಾರ್ (19), ನಿಖಿಲ್ (21), ಎಚ್ ಮುನೇಶ್ (22), ಜೀವನ್ (19), ಕಾರ್ತಿಕ್ (19) ಮತ್ತು ಟಿಪಿ ಮದನ್ (20) ಎಂದು ಗುರುತಿಸಲಾಗಿದೆ.
ಆರೋಪಿಗಳಿಂದ 8 ಮೊಬೈಲ್ ಗಳು, ರೂ.5,000 ನಗದು ಹಾಗೂ ಗೂಡ್ಸ್ ವಾಹನ ಜಪ್ತಿ ಮಾಡಲಾಗಿದೆ. ಕೆಲ ದಿನಗಳ ಹಿಂದೆ ಕೆಲಸ ಮುಗಿಸಿಕೊಂಡು ಮನೆಗೆ ಹೋಗಲು ಕ್ಯಾಬ್ ಕಾಯುತ್ತಿದ್ದ ನೇಪಾಳ ಮೂಲದ ಬಹದ್ದೂರ್, ವಿಜಯ್ ಹಾಗೂ ಅನಿಲ್ ಬೋರಾ ಮೇಲೆ ಹಲ್ಲೆ ನಡೆಸಿ, ಮೊಬೈಲ್ ದೋಚಿ ಕಿಡಿಗೇಡಿಗಳು ಪರಾರಿಯಾಗಿದ್ದರು.
ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿಜಯ್ ಬೋರಾ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದ. ಈ ಸಂಬಂಧ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದರು. ಇದೀಗ ಆರೋಪಿಗಳನ್ನು ಬಂಧನಕ್ಕೊಳಪಡಿಸಿರುವ ಪೊಲೀಸರು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


