ಬೆಳಗಾವಿ ಅಧಿವೇಶನ: ಪೊಲೀಸ್ ವಾಸ್ತವ್ಯಕ್ಕೆ 2 ಕೋಟಿ ರೂ. ವೆಚ್ಚದಲ್ಲಿ 4 ಜರ್ಮನ್ ಟೆಂಟ್ ನಿರ್ಮಾಣ
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4 ರಿಂದ 15 ರವರೆಗೆ ಚಳಿಗಾಲದ ಅಧಿವೇಶನ ನಡೆಯಲಿದ್ದು, ಭದ್ರತೆಗಾಗಿ 5 ಸಾವಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.

ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4 ರಿಂದ 15 ರವರೆಗೆ ಚಳಿಗಾಲದ ಅಧಿವೇಶನ ನಡೆಯಲಿದ್ದು, ಭದ್ರತೆಗಾಗಿ 5 ಸಾವಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.
ಪೊಲೀಸ್ ಸಿಬ್ಬಂದಿಯ ವಾಸ್ತವ್ಯಕ್ಕೆ ಸುಮಾರು ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ನಾಲ್ಕು ಬೃಹತ್ ಜರ್ಮನ್ ಟೆಂಟ್ಗಳನ್ನು ನಿರ್ಮಿಸಲಾಗುತ್ತಿದೆ.
ಸುವರ್ಣ ವಿಧಾನ ಸೌಧದ ಅಲಾರವಾಡ ಬಳಿ 5 ಸಾವಿರಕ್ಕೂ ಹೆಚ್ಚು ಸಂಖ್ಯೆಯ ಪೊಲೀಸರ ವಾಸ್ತವ್ಯಕ್ಕೆ ನಾಲ್ಕು ದೊಡ್ಡ ದೊಡ್ಡ ಜರ್ಮನ್ ಟೆಂಟ್ ನೊಂದಿಗೆ ಬೃಹತ್ ಟೌನ್ ಶಿಪ್ ನಿರ್ಮಿಸಲಾಗುವುದು. ಬಂದೋಬಸ್ತ್‌ಗೆ ರಾಜ್ಯದ ನಾನಾ ಜಿಲ್ಲೆಗಳಿಂದ ಬರುವ ಪೊಲೀಸ್ ಸಿಬ್ಬಂದಿಗೆ ಇಲ್ಲಿ ವಾಸ್ತವ್ಯಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಬೆಳಗಾವಿ ಪೊಲೀಸ್ ಆಯುಕ್ತ ಎಸ್ಎಸ್ ಸಿದ್ರಾಮಪ್ಪ ಅವರು ಮಾಹಿತಿ ನೀಡಿದ್ದಾರೆ.
ಒಂದು ಜರ್ಮನ್ ಟೆಂಟ್ 100 ಅಡಿ ಅಗಲ, 200 ಅಡಿ ಉದ್ದ ಇರಲಿದೆ. ನಾಲ್ಕು ದೊಡ್ಡ ಮತ್ತು ಒಂದು ಚಿಕ್ಕ ಟೆಂಟ್ ನಿರ್ಮಿಸಲಾಗುತ್ತಿದೆ. ಒಂದು ಬೃಹತ್ ಟೆಂಟ್ನಲ್ಲಿ 500 ಸಿಬ್ಬಂದಿ ಮಲಗಲು ವ್ಯವಸ್ಥೆ ಇರಲಿದೆ. ಸಿಂಗಲ್ ಕಾಟ್ ಜೊತೆ ಬೆಡ್-ದಿಂಬು, ಬೆಡ್ಶೀಟ್, ಹಾಸಿಗೆ, ಚಾರ್ಜಿಂಗ್ ವ್ಯವಸ್ಥೆ ಇರಲಿದೆ.
ಹಿರಿಯ ಅಧಿಕಾರಿಗಳಿಗಾಗಿ ಚಿಕ್ಕ ಟೆಂಟ್ ನಿರ್ಮಾಣ ಮಾಡಲಾಗಿದೆ. ಏಕಕಾಲದಲ್ಲಿ 2 ಸಾವಿರ ಜನರು ಮಲಗಬಹುದಾಗಿದೆ. ಪಾಳಿ ಕೆಲಸ ಮಾಡೋದರಿಂದ ಯಾವುದೇ ತೊಂದರೆ ಆಗಲ್ಲ ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


