ಕಲಬುರಗಿ: ಲಾರಿ-ಬೈಕ್ ಡಿಕ್ಕಿಯಾಗಿ ಪರೀಕ್ಷೆ ಮುಗಿಸಿ ಮನೆಗೆ ಮರಳುತ್ತಿದ್ದ ವಿದ್ಯಾರ್ಥಿ ಸೇರಿ ಇಬ್ಬರು ಸಾವು
ಆಳಂದ ತಾಲ್ಲೂಕಿನ ಕಡಗಂಚಿ ಕೇಂದ್ರೀಯ ವಿಶ್ವವಿದ್ಯಾಲಯದ ಎದುರಿನ ಮುಖ್ಯರಸ್ತೆಯಲ್ಲಿ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಶನಿವಾರ ವಿದ್ಯಾರ್ಥಿ ಮತ್ತು ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಕಲಬುರಗಿ: ಆಳಂದ ತಾಲ್ಲೂಕಿನ ಕಡಗಂಚಿ ಕೇಂದ್ರೀಯ ವಿಶ್ವವಿದ್ಯಾಲಯದ ಎದುರಿನ ಮುಖ್ಯರಸ್ತೆಯಲ್ಲಿ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಶನಿವಾರ ವಿದ್ಯಾರ್ಥಿ ಮತ್ತು ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಮೃತರನ್ನು ಆಳಂದ ಪಟ್ಟಣದ ಅಶೋಕ ಇಂಗಳೆ (48) ಮತ್ತು ವಿದ್ಯಾರ್ಥಿ ಸಲಾವುದ್ದೀನ್ ಅಹ್ಮದ್ (15) ಎಂದು ಗುರುತಿಸಲಾಗಿದೆ.
ಪಟ್ಟಣದ ಶಾಲೆಯೊಂದರಲ್ಲಿ ಒಂಬತ್ತನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯು ಪರೀಕ್ಷೆ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಮನೆ ಸಮೀಪದ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅಶೋಕ ಎಂಬುವವರು ವಿದ್ಯಾರ್ಥಿಯನ್ನು ಬೈಕ್ ಮೇಲೆ ಕರೆದೊಯ್ಯುತ್ತಿದ್ದಾಗ ಎದುರಿಗೆ ಬಂದ ಲಾರಿ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಅಶೋಕ ಸ್ಥಳದಲ್ಲೇ ಮೃತಪಟ್ಟರೆ, ವಿದ್ಯಾರ್ಥಿಯು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


