ಗ್ಯಾರಂಟಿ ಯೋಜನೆಗಳ ಜಾರಿ ನಂತರ ಜಿಎಸ್‌ಟಿ ಸಂಗ್ರಹದಲ್ಲಿ ಭಾರಿ ಏರಿಕೆ; ರಾಜ್ಯದ ಆರ್ಥಿಕ ಬೆಳವಣಿಗೆ ದಿಕ್ಸೂಚಿ: ಸಿದ್ದರಾಮಯ್ಯ
ಮಂದಗತಿಯಲ್ಲಿ ಸಾಗುತ್ತಿದ್ದ ರಾಜ್ಯದ ವ್ಯಾಪಾರ ವಹಿವಾಟು ಗ್ಯಾರಂಟಿ ಯೋಜನೆಗಳ ಜಾರಿ ನಂತರ ಗರಿಗೆದರಿದ್ದು, ಸೆಪ್ಟೆಂಬರ್ ತಿಂಗಳ ಸರಕು ಮತ್ತು ಸೇವಾ ತೆರಿಗೆ (ಜಿ.ಎಸ್.ಟಿ) ಸಂಗ್ರಹದಲ್ಲಿ ಭಾರೀ ಹೆಚ್ಚಳವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರು: ಮಂದಗತಿಯಲ್ಲಿ ಸಾಗುತ್ತಿದ್ದ ರಾಜ್ಯದ ವ್ಯಾಪಾರ ವಹಿವಾಟು ಗ್ಯಾರಂಟಿ ಯೋಜನೆಗಳ ಜಾರಿ ನಂತರ ಗರಿಗೆದರಿದ್ದು, ಸೆಪ್ಟೆಂಬರ್ ತಿಂಗಳ ಸರಕು ಮತ್ತು ಸೇವಾ ತೆರಿಗೆ ( ಜಿ.ಎಸ್.ಟಿ ) ಸಂಗ್ರಹದಲ್ಲಿ ಭಾರೀ ಹೆಚ್ಚಳವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿದ್ದರಾಮಯ್ಯ, ಕಳೆದ ವರ್ಷದ ಸೆಪ್ಟೆಂಬರ್ ತಿಂಗಳ ಸಂಗ್ರಹಕ್ಕಿಂತ ಈಬಾರಿ ಶೇ. 20 ರಷ್ಟು ಪ್ರಗತಿ ಕಂಡಿದೆ. ಸೆಪ್ಟೆಂಬರ್ ನಲ್ಲಿ ರೂ. 11,693 ಕೋಟಿ ಜಿಎಸ್‌ಟಿ ಸಂಗ್ರಹವಾಗಿದ್ದು, ಇದು ರಾಜ್ಯದ ಆರ್ಥಿಕ ಬೆಳವಣಿಗೆಯ ದಿಕ್ಸೂಚಿ ಎಂದು ಭಾವಿಸಿದ್ದೇನೆ ಎಂದಿದ್ದಾರೆ.
ಬಡವರ ಜೀಬಿಗೆ ಹಣ ಹಾಕಿದರೆ ಅವರಲ್ಲಿ ಕೊಳ್ಳುವ ಸಾಮರ್ಥ್ಯ ಬರುತ್ತದೆ, ಇದರಿಂದ ವ್ಯಾಪಾರ ವಹಿವಾಟು ಹೆಚ್ಚಾಗುತ್ತದೆ ' ಎಂದು ಈ ಹಿಂದೆ ಹಲವು ಬಾರಿ ಹೇಳಿದ್ದೆ,'ಕಳೆದ ತಿಂಗಳ ಜಿಎಸ್‌ಟಿ ಸಂಗ್ರಹ ನನ್ನ ಮಾತನ್ನು ಸಾಬೀತು ಮಾಡಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


