ಬಿಡಿಎ ಆಯುಕ್ತರಾಗಿ ಎನ್. ಜಯರಾಮ್ ನೇಮಕ: ರಾಜ್ಯ ಸರ್ಕಾರ ಆದೇಶ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಆಯುಕ್ತ ಹುದ್ದೆಗೆ ಹಿರಿಯ ಐಎಎಸ್ ಅಧಿಕಾರಿ ಎನ್.ಜಯರಾಮ್ ಅವರನ್ನು ನೇಮಿಸಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಆಯುಕ್ತ ಹುದ್ದೆಗೆ ಹಿರಿಯ ಐಎಎಸ್ ಅಧಿಕಾರಿ ಎನ್.ಜಯರಾಮ್ ಅವರನ್ನು ನೇಮಿಸಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.
ಜಯರಾಮ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯದರ್ಶಿಯೂ ಆಗಿದ್ದಾರೆ. ಬಿಡಿಎ ಆಯುಕ್ತರಾಗಿದ್ದ ಕುಮಾರ ನಾಯಕ್ ಅವರು ನಿವೃತ್ತರಾದ ಕಾರಣ ತೆರವಾದ ಹುದ್ದೆಗೆ ಜಯರಾಮ್ ಅವರನ್ನು ನಿಯೋಜಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.
2004ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಜಯರಾಮ್ ಅವರು, ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ಹೆಚ್ಚುವರಿ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಅವರು ಈ ಹಿಂದೆ ಮೈಸೂರಿನಲ್ಲಿ ಮುಡಾ ಆಯುಕ್ತರಾಗಿ, ಬೆಳಗಾವಿ ಜಿಲ್ಲಾಧಿಕಾರಿಯಾಗಿ, ಕಂದಾಯ ಇಲಾಖೆಯ ಕಾರ್ಯದರ್ಶಿಯಾಗಿ ಮತ್ತು ಇತರ ಪ್ರಮುಖ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದರು. ಅವರು ಮೈಸೂರು ಮೂಲದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಎಂಎಲ್ಸಿ ಸಂದೇಶ್ ನಾಗರಾಜ್ ಅವರ ಅಳಿಯ ಆಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


