ಕೇಂದ್ರದ ಮೂರು ತಂಡಗಳು ಗುರುವಾರ ರಾಜ್ಯಕ್ಕೆ ಭೇಟಿ; 12 ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ಅಧ್ಯಯನ
ರಾಜ್ಯದಲ್ಲಿ ಸದ್ಯ ತಲೆದೋರಿರುವ ಬರ ಪರಿಸ್ಥಿತಿಯನ್ನು ಅವಲೋಕಿಸಲು ಕೇಂದ್ರದ ಮೂರು ತಂಡಗಳು ಗುರುವಾರ ಕರ್ನಾಟಕಕ್ಕೆ ಭೇಟಿ ನೀಡಲಿವೆ. ಮೌಲ್ಯಮಾಪನ ಆರಂಭಿಸುವ ಮುನ್ನ ತಂಡಗಳು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಿವೆ ಎಂದು ಮೂಲಗಳು ಖಚಿತಪಡಿಸಿವೆ.

ಬೆಂಗಳೂರು: ರಾಜ್ಯದಲ್ಲಿ ಸದ್ಯ ತಲೆದೋರಿರುವ ಬರ ಪರಿಸ್ಥಿತಿಯನ್ನು ಅವಲೋಕಿಸಲು ಕೇಂದ್ರದ ಮೂರು ತಂಡಗಳು ಗುರುವಾರ ಕರ್ನಾಟಕಕ್ಕೆ ಭೇಟಿ ನೀಡಲಿವೆ.
ಮೌಲ್ಯಮಾಪನ ಆರಂಭಿಸುವ ಮುನ್ನ ತಂಡಗಳು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಿವೆ ಎಂದು ಮೂಲಗಳು ಖಚಿತಪಡಿಸಿವೆ.
ಅಕ್ಟೋಬರ್ 9ರವರೆಗೆ ರಾಜ್ಯದಲ್ಲಿಯೇ ಇರಲು ನಿರ್ಧರಿಸಲಾಗಿದ್ದು, ಈ ವೇಳೆ ತಂಡಗಳು ಬೆಳಗಾವಿ, ವಿಜಯಪುರ, ಬಾಗಲಕೋಟೆ, ಧಾರವಾಡ, ಚಿತ್ರದುರ್ಗ, ಹಾವೇರಿ, ಗದಗ, ಕೊಪ್ಪಳ, ವಿಜಯನಗರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಬರ ಪರಿಸ್ಥಿತಿಯನ್ನು ಅವಲೋಕಿಸಲಿವೆ ಎನ್ನಲಾಗಿದೆ.
ರಾಜ್ಯದ ಕಾಂಗ್ರೆಸ್ ಸರ್ಕಾರ ರಾಜ್ಯದ 195 ತಾಲೂಕುಗಳಲ್ಲಿ ಬರ ಘೋಷಣೆ ಮಾಡಿದೆ.
ಬರದಿಂದ ರಾಜ್ಯಕ್ಕೆ 30,432 ಕೋಟಿ ರೂ. ನಷ್ಟವಾಗಿದೆ. 39,039 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ. ತೋಟಗಾರಿಕೆ ಬೆಳೆ 2,655 ಕೋಟಿ ರೂ. ನಷ್ಟವಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ಹೇಳಿದ್ದಾರೆ.
ಕೃಷಿ ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, ಒಟ್ಟು 195 ತಾಲ್ಲೂಕುಗಳ ಪೈಕಿ 161 ತೀವ್ರ ಬರ ಪರಿಸ್ಥಿತಿ ಎದುರಿಸುತ್ತಿದ್ದು, 34 ಸಾಮಾನ್ಯ ಮತ್ತು 40 ಮಳೆ ಕೊರತೆಯನ್ನು ಎದುರಿಸುತ್ತಿವೆ ಎಂದಿದ್ದಾರೆ.
ಬರ ನಿರ್ವಹಣೆಗಾಗಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದಿಂದ 6,000 ಕೋಟಿ ರೂಪಾಯಿ ಪ್ಯಾಕೇಜ್ ಕೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


