ಅಪ್ರಾಪ್ತ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ ಅಡುಗೆಯವನ ಬಂಧನ
ಅಪ್ರಾಪ್ತ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಮತ್ತು ಅದನ್ನು ವಿಡಿಯೋ ಮಾಡುತ್ತಿದ್ದ ಆರೋಪದ ಮೇಲೆ ಒಡಿಶಾದ 47 ವರ್ಷದ ಅಡುಗೆ ಸಿಬ್ಬಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಹುಬ್ಬಳ್ಳಿ: ಅಪ್ರಾಪ್ತ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಮತ್ತು ಅದನ್ನು ವಿಡಿಯೋ ಮಾಡುತ್ತಿದ್ದ ಆರೋಪದ ಮೇಲೆ ಒಡಿಶಾದ 47 ವರ್ಷದ ಅಡುಗೆ ಸಿಬ್ಬಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಆರೋಪಿ ಪ್ರಭಂಜನ ಪಾಲನಿಂದ ಲೈಂಗಿಕ ದೌರ್ಜನ್ಯ ಮತ್ತು ಬೆದರಿಕೆಗೆ ಒಳಗಾದ ಇಬ್ಬರು ಅಪ್ರಾಪ್ತರ ಪೋಷಕರು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಪೊಲೀಸರ ಪ್ರಕಾರ, ನಗರದ ಪ್ರಮುಖ ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ಮೊದಲು ಅಪ್ರಾಪ್ತ ಬಾಲಕರೊಂದಿಗೆ ಸ್ನೇಹ ಬೆಳೆಸುತ್ತಿದ್ದ ಮತ್ತು ತಿಂಡಿ, ಚಾಕೊಲೇಟ್ ಮತ್ತು ಹಣದ ಆಮಿಷ ಒಡ್ಡಿ ಇಲ್ಲಿನ ಸಿದ್ದಲಿಂಗೇಶ್ವರ ಕಾಲೋನಿಯಲ್ಲಿರುವ ತನ್ನ ಬಾಡಿಗೆ ನಿವಾಸಕ್ಕೆ ಕರೆದೊಯ್ಯುತ್ತಿದ್ದ.
ಬಳಿಕ ಅವರನ್ನು ತನ್ನ ಕೋಣೆಗೆ ಕರೆದೊಯ್ದು ಚಾಕುವಿನಿಂದ ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ಅಸ್ವಾಭಾವಿಕ ಲೈಂಗಿಕ ಕ್ರಿಯೆಗಳಿಗೆ ಒತ್ತಾಯಿಸುತ್ತಿದ್ದ ಆರೋಪಿ, ಮತ್ತೊಬ್ಬ ಹುಡುಗನ ಸಹಾಯದಿಂದಲೇ ಅದನ್ನು ತನ್ನ ಮೊಬೈಲ್ ಫೋನಿನಲ್ಲಿ ವಿಡಿಯೋ ಮಾಡಿಕೊಳ್ಳುತ್ತಿದ್ದ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆಯನ್ನು ಬೇರೆಯವರಿಗೆ ತಿಳಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಆರೋಪಿ ಬಾಲಕರಿಗೆ ಬೆದರಿಕೆ ಹಾಕಿದ್ದಾನೆ. ಬಾಲಕರ ಮೇಲೆ ಅನೇಕ ಸಂದರ್ಭಗಳಲ್ಲಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಅವರು ಹೇಳಿದರು.
ಈ ವಿಚಾರ ಸಾರ್ವಜನಿಕರ ಗಮನಕ್ಕೆ ಬರುತ್ತಲೇ, ಸ್ಥಳೀಯರು ಆರೋಪಿಯನ್ನು ಹಿಡಿದು ಥಳಿಸಿದ್ದಾರೆ. ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ.
ದೂರಿನ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 377 (ನೈಸರ್ಗಿಕವಲ್ಲದ ಅಪರಾಧಗಳು), 506 (2) (ಕ್ರಿಮಿನಲ್ ಬೆದರಿಕೆ), ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಮತ್ತು ಐಟಿ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


