ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ಗೆ ಪತ್ರ ಬರೆದರೆ ತಪ್ಪಿಲ್ಲ, ಜಾತಿ ಗಣತಿ ವರದಿ ಬಿಡುಗಡೆಯಾದರೆ ಒಳ್ಳೇದು: ಡಾ ಜಿ ಪರಮೇಶ್ವರ್
ಹಳೆ ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ಗೆ ಡಿಸಿಎಂ ಡಿಕೆ ಶಿವಕುಮಾರ್ ಪತ್ರ ಬರೆದಿದ್ದರೆ ಅದರಲ್ಲಿ ತಪ್ಪೇನು ಇಲ್ಲ, ಒಳ್ಳೆಯದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಇಂದು ಬುಧವಾರ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಮುಂದೆ ಹೇಳಿದ್ದಾರೆ.

ಬೆಂಗಳೂರು: ಹಳೆ ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ಗೆ ಡಿಸಿಎಂ ಡಿಕೆ ಶಿವಕುಮಾರ್ ಪತ್ರ ಬರೆದಿದ್ದರೆ ಅದರಲ್ಲಿ ತಪ್ಪೇನು ಇಲ್ಲ, ಒಳ್ಳೆಯದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಇಂದು ಬುಧವಾರ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಮುಂದೆ ಹೇಳಿದ್ದಾರೆ.
ಸಚಿವರು, ಶಾಸಕರಿಗೆ ಮನವಿ ಸಲ್ಲಿಸಿದರೆ ನಮಗೆ ಕಳುಹಿಸಿಕೊಡುತ್ತಾರೆ. ಆ ಮನವಿ ನನಗೆ ಬರುತ್ತದೆ, ಇಲ್ಲದಿದ್ದರೆ ಇಲಾಖೆ ಡಿಜಿಗೆ ಕಳುಹಿಸುತ್ತಾರೆ. ಆಗ ನಾವು ಸಂಪುಟ ಉಪ ಸಮಿತಿ ಮುಂದೆ ಚರ್ಚೆ ಮಾಡುತ್ತೇವೆ. ಏನೇನು ಸೆಕ್ಷನ್ ಹಾಕಿರುತ್ತಾರೆ ಎಲ್ಲವನ್ನೂ ಪರಿಶೀಲನೆ ಮಾಡುತ್ತೇವೆ. ಅಂತಿಮವಾಗಿ ಕೇಸ್ ಹಿಂಪಡೆಯುವ ಬಗ್ಗೆ ಸಂಪುಟದಲ್ಲಿಯೇ ತೀರ್ಮಾನ ಮಾಡಲಾಗುತ್ತದೆ.
ಪತ್ರ ಬರೆದರು ಎಂದು ಬೊಬ್ಬೆ ಹೊಡೆದರೆ ನಾವು ಏನು ಮಾಡಬೇಕು. ನಾನು ಇನ್ನೂ ಪತ್ರ ನೋಡಿಲ್ಲ, ಒಂದು ವೇಳೆ ಪತ್ರ ಬರೆದರೂ ತಪ್ಪಿಲ್ಲ ಎಂದರು.
ಬಿಹಾರ ಸರ್ಕಾರ ಬಿಹಾರದಲ್ಲಿ ಜಾತಿ ಗಣತಿ ವರದಿ ಪ್ರಕಟಿಸಿದ ಬೆನ್ನಲ್ಲೇ ಕರ್ನಾಟಕ ರಾಜ್ಯದಲ್ಲೂ ಜಾತಿಗಣತಿ ವರದಿ ಬಿಡುಗಡೆಗೆ ಒತ್ತಾಯ ಕೇಳಿ ಬಂದಿದೆ. ಈ ಕುರಿತು ಕೇಳಿದಾಗ, ಸರ್ಕಾರಕ್ಕೆ ಜಾತಿ ಗಣತಿ ವರದಿ ಸಲ್ಲಿಸಿದ ಬಳಿಕ ಚರ್ಚೆ ಮಾಡೋಣ ಶೀಘ್ರವೇ ಸರ್ಕಾರಕ್ಕೆ ವರದಿ ಸಲ್ಲಿಸುವುದಾಗಿ ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ. ಜಾತಿ ಗಣತಿ ನಡೆಸಲು ಅಂದಾಜು 100 ಕೋಟಿ ರೂಪಾಯಿಗೂ ಹೆಚ್ಚು ಖರ್ಚಾಗಿದೆ. ಇಷ್ಟು ಹಣ ಖರ್ಚು ಮಾಡಿ ವರದಿ ಬಿಡುಗಡೆ ಮಾಡದಿದ್ದರೇ ವ್ಯರ್ಥ ಆಗುವುದಿಲ್ಲವೇ, ಜಾತಿಗಣತಿ ಬಿಡುಗಡೆಯಾದರೆ ಒಳ್ಳೆಯದು ರಾಜ್ಯದಲ್ಲಿ ಮೀಸಲಾತಿ ಕೂಗು ಕೇಳಿಬಂದಿದೆ. ಸರ್ಕಾರ ದುಂದುವೆಚ್ಚಕ್ಕಾಗಿ ಜಾತಿ ಗಣತಿ ಮಾಡಿಲ್ಲ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


