ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ: ಕೆಆರ್'ಎಸ್ ಡ್ಯಾಮ್ ನಲ್ಲಿ 100 ಅಡಿ ದಾಟಿದ ನೀರಿನ ಸಂಗ್ರಹ
ಕಳೆದ 3 ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಸ್ವಲ್ಪ ಮಟ್ಟಿಗೆ ಮಳೆಯಾಗುತ್ತಿದ್ದು, ಇದರ ಪರಿಣಾಮ ಕೆಆರ್'ಎಸ್ ಡ್ಯಾಮ್ ನಲ್ಲಿ ನೀರಿನ ಪ್ರಮಾಣ ಹೆಚ್ಚಿದೆ.

ಮಂಡ್ಯ: ಕಳೆದ 3 ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಸ್ವಲ್ಪ ಮಟ್ಟಿಗೆ ಮಳೆಯಾಗುತ್ತಿದ್ದು, ಇದರ ಪರಿಣಾಮ ಕೆಆರ್'ಎಸ್ ಡ್ಯಾಮ್ ನಲ್ಲಿ ನೀರಿನ ಪ್ರಮಾಣ ಹೆಚ್ಚಿದೆ.
ಕಾವೇರಿ ನೀರಾವರಿ ನಿಗಮ ನಿಯಮಿತ (ಸಿಎನ್‌ಎನ್‌ಎಲ್) ಅಧಿಕಾರಿಗಳ ಪ್ರಕಾರ, ಗರಿಷ್ಠ 124.80 ಅಡಿಗಳ ಪೈಕಿ ಜಲಾಶಯದಲ್ಲಿ ಇದೀಗ ನೀರಿನ ಮಟ್ಟ 100.36 ಅಡಿಗೆ ತಲುಪಿದೆ. 49.452 ಟಿಎಂಸಿ ಪೈಕಿ ಜಲಾಶಯದಲ್ಲಿ 23.095 ಟಿಎಂಸಿ ಅಡಿ ನೀರಿನ ಸಂಗ್ರಹವಿದೆ. ಜಲಾಶಯದಲ್ಲಿ 9,052 ಕ್ಯೂಸೆಕ್ ಒಳಹರಿವಿದ್ದರೆ, 1,482 ಕ್ಯೂಸೆಕ್ ಹೊರಹರಿವಿದೆ ಎಂದು ಹೇಳಿದ್ದಾರೆ.
ಕೆಲ ತಿಂಗಳುಗಳಿಂದ ಮಳೆಯಿಲ್ಲದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದರು. ಸೆಪ್ಟೆಂಬರ್ ನಿಂದ ಡ್ಯಾಮ್ ನಲ್ಲಿ ನೀರಿನ ಮಟ್ಟ ಕುಸಿದಿತ್ತು. ಜೊತೆಗೆ ತಮಿಳುನಾಡಿಗೆ ನೀರು ಹರಿಸಬೇಕಾದ ಅನಿವಾರ್ಯತೆ ಎದುರಾಗಿರುವುದರಿಂದ, ಕಾವೇರಿ ನೀರಿನ ಕುರಿತು ಆತಂಕ ಶುರುವಾಗಿತ್ತು.
ಇದೀಗ ಕೊಂಚ ಮಟ್ಟಿಗೆ ಮಳೆಯಾಗಿರುವುದರಿಂದ ಜಲಾಶಯದಲ್ಲಿ ನೀರಿನ ಮಟ್ಟ 100.36 ಅಡಿಗೆ ತಲುಪಿದೆ. ತಮಿಳುನಾಡಿನ ನೀರಿನ ಖ್ಯಾತೆ ನಡುವೆ ಜಲಾಶಯದಲ್ಲಿ ಒಳಹರಿವು ಕೊಂಚ ಮಟ್ಟಿಗೆ ಏರಿಕೆಯಾಗಿರುವುದು ನಿಟ್ಟಿಸಿರು ಬಿಡುವಂತಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


