ಸಾಲು ಮರದ ತಿಮ್ಮಕ್ಕ ಆರೋಗ್ಯವಾಗಿದ್ದಾರೆ: ಸಾವಿನ ವದಂತಿಗಳಿಗೆ ತೆರೆ ಎಳೆದ ದತ್ತುಪುತ್ರ ಉಮೇಶ್ ವನಸಿರಿ
ಕರ್ನಾಟಕ ಸರ್ಕಾರದ ಪರಿಸರ ರಾಯಭಾರಿಯಾಗಿರುವ ವೃಕ್ಷ ಮಾತೆ, ಸಾಲು ಮರದ ತಿಮ್ಮಕ್ಕ ನಿಧನರಾಗಿದ್ದಾರೆ ಎಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಬೆಂಗಳೂರು: ಕರ್ನಾಟಕ ಸರ್ಕಾರದ ಪರಿಸರ ರಾಯಭಾರಿಯಾಗಿರುವ ವೃಕ್ಷ ಮಾತೆ, ಸಾಲು ಮರದ ತಿಮ್ಮಕ್ಕ ನಿಧನರಾಗಿದ್ದಾರೆ ಎಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಈ ಸಂಬಂಧ ಅವರ ದತ್ತು ಪುತ್ರ ಉಮೇಶ್ ವಿಡಿಯೊ ಹಂಚಿಕೊಂಡಿದ್ದು, ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ಮೂರು ತಿಂಗಳ ಹಿಂದೆ ಅವರು ಬೆಂಗಳೂರಿನ ತಮ್ಮ ಮನೆಯಲ್ಲಿ ಬಿದ್ದು ಗಾಯಗೊಂಡು ಚಿಕಿತ್ಸೆ ಪಡೆದಿದ್ದರು. ನಂತರ ಬೇಲೂರು ಸಮೀಪದ ಬಳ್ಳೂರಿನಲ್ಲಿರುವ ಉಮೇಶ್ ಅವರ ಮನೆಗೆ ತೆರಳಿದ್ದರು.
ಸೆಪ್ಟೆಂಬರ್ 26ರಂದು ಅವರ ಉಸಿರಾಟದಲ್ಲಿ ಏರುಪೇರಾಗಿದ್ದರಿಂದ ಬೇಲೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಸೋಮವಾರ ರಾತ್ರಿಯಿಂದ ಉಸಿರಾಟದಲ್ಲಿ ತೀವ್ರ ಏರು ಪೇರಾಗಿದ್ದರಿಂದ ಬೆಂಗಳೂರಿನ ಅಪೋಲೊ ಆಸ್ಪತ್ರೆಗೆ ಮಂಗಳವಾರ ದಾಖಲಿಸಲಾಗಿತ್ತು. ಚಿಕಿತ್ಸೆ ಮುಂದುವರಿದಿದೆ.
ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಆಕೆಗೆ ಆಸ್ತಮಾದ ಇತಿಹಾಸವಿದೆ, ಆದರೆ ಚಿಂತಿಸುವ ಅಗತ್ಯವಿಲ್ಲ. ನಾವು ಇನ್ನೂ 2-3 ದಿನಗಳವರೆಗೆ ಅವರ ಆರೋಗ್ಯದ ಮೇಲ್ವಿಚಾರಣೆ ಮಾಡುವುದನ್ನು ಮುಂದುವರಿಸುತ್ತೇವೆ ಎಂದು ಅಪೊಲೊದಲ್ಲಿ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


