ಕಾವೇರಿ ವಿವಾದ: ಕೆಆರ್'ಎಸ್ ಗೆ ಮುತ್ತಿಗೆ ಹಾಕಲು ಕನ್ನಡಪರ ಹೋರಾಟಗಾರರ ಯತ್ನ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕನ್ನಡ ಚಳುವಳಿ ವಾಟಾಳ್ ಪಕ್ಷದ ಮುಖಂಡ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಬೆಂಗಳೂರಿನ ಸಾವಿರಾರು ಕನ್ನಡಪರ ಕಾರ್ಯಕರ್ತರು ಗುರುವಾರ ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಜಲಾಶಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕನ್ನಡ ಚಳುವಳಿ ವಾಟಾಳ್ ಪಕ್ಷದ ಮುಖಂಡ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಬೆಂಗಳೂರಿನ ಸಾವಿರಾರು ಕನ್ನಡಪರ ಕಾರ್ಯಕರ್ತರು ಗುರುವಾರ ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಜಲಾಶಯಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.
ಪ್ರತಿಭಟನೆ ಹಿನ್ನೆಲೆಯಲ್ಲಿ ಜಲಾಶಯದ ಸುತ್ತಮುತ್ತ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಕಾರ್ಯಕರ್ತರು ಜಲಾಶಯದ ಪ್ರದೇಶಕ್ಕೆ ಆಗಮಿಸುತ್ತಿದ್ದಂತೆಯೇ ಪೊಲೀಸರು ಅವರನ್ನು ತಡೆದರು.
ಈ ವೇಳೆ ಕರ್ನಾಟಕವು ಬರಗಾಲದಂತಹ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಈ ಸಂದರ್ಭದಲ್ಲಿ ತಮಿಳುನಾಡು ರಾಜ್ಯಕ್ಕೆ ಕಾವೇರಿ ನೀರು ಬಿಡುಗಡೆ ಮಾಡುವ ಒತ್ತಡಕ್ಕೆ ಮಣಿಯುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದರು.
ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದಕ್ಕೂ ಮುನ್ನ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್ ಅವರು, ನಮ್ಮ ಜಲಾಶಯಗಳಲ್ಲಿ ಸಮರ್ಪಕ ನೀರಿಲ್ಲದಿರುವಾಗ ತಮಿಳುನಾಡಿಗೆ ಕಾವೇರಿ ನೀರು ಬಿಡುವುದು ಹೇಗೆ? ತಮಿಳುನಾಡಿಗೆ ನೀರು ಬಿಡುವುದನ್ನು ವಿರೋಧಿಸಿ ಬೆಂಗಳೂರಿನಿಂದ ಬಿಡದಿ, ರಾಮನಗರ ಚನ್ನಪಟ್ಟಣ, ಮದ್ದೂರು, ಮಂಡ್ಯ ಮೂಲಕ ಕೆಆರ್‌ಎಸ್ ಜಲಾಶಯದವರೆಗೆ ವಾಹನ ರ್ಯಾಲಿ ನಡೆಸುತ್ತಿದ್ದೇವೆ ಎಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


