ಗಣೇಶ ವಿಸರ್ಜನೆ ವೇಳೆ ಮಸೀದಿಗೆ ಮಂಗಳಾರತಿ ಪ್ರಕರಣ: ಕರ್ತವ್ಯ ಲೋಪವೆಸಗಿದ 3 ಪೊಲೀಸರ ಅಮಾನತು
ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕರ್ತವ್ಯ ಲೋಪ ಎಸಗಿದ ಕಾರಣಕ್ಕಾಗಿ ಮೂವರ ಪೊಲೀಸರನ್ನು ಅಮಾನತು ಮಾಡಲಾಗಿದೆ.

ಕೊಪ್ಪಳ: ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕರ್ತವ್ಯ ಲೋಪ ಎಸಗಿದ ಕಾರಣಕ್ಕಾಗಿ ಮೂವರ ಪೊಲೀಸರನ್ನು ಅಮಾನತು ಮಾಡಲಾಗಿದೆ.
ಗಂಗಾವತಿ ನಗರ ಠಾಣೆ ಪೊಲೀಸ್ ಇನ್‌ಸ್ಪೆಕ್ಟರ್ ಅಡಿವೇಶ ಎಸ್. ಗುದಿಗೊಪ್ಪ, ಸಬ್ ಇನ್‌ಸ್ಪೆಕ್ಟರ್ ಕಾಮಣ್ಣ ಹಾಗೂ ಹೆಡ್ ಕಾನ್‌ಸ್ಟೆಬಲ್ ಮರಿಯಪ್ಪ ಅಮಾನತುಗೊಂಡವರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಈ ವಿಷಯ ಖಚಿತಪಡಿಸಿದ್ದಾರೆ.
ಇಲ್ಲಿನ ಎಂ.ಜಿ. ರಸ್ತೆಯಲ್ಲಿರುವ ಜಾಮಿಯಾ ಮಸೀದಿ ಮುಂಭಾಗ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಮಂಗಳವಾರ ರಾತ್ರಿ ಕೆಲವರು ಕುಂಡದಲ್ಲಿ ಬೆಂಕಿಹಚ್ಚಿ, ಕುಂಬಳಕಾಯಿ ಒಡೆದು ಪೂಜೆ ಸಲ್ಲಿಸಿದ್ದರು. ಇದು ಮುಸ್ಲಿಂ ಸಮುದಾಯದವರ ಆಕ್ಷೇಪಕ್ಕೆ ಕಾರಣವಾಗಿ ವಾಗ್ವಾದ ನಡೆದಿತ್ತು. ಕರ್ತವ್ಯದ ವೇಳೆಯಲ್ಲಿಯೇ ಮೆರವಣಿಗೆ ಸಮಯದಲ್ಲಿ ಮರಿಯಪ್ಪ ಅವರನ್ನು ಹೊತ್ತು ಕುಣಿದಿದ್ದ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಈ ಸಂಬಂಧ ನಗರ ಠಾಣೆಯಲ್ಲಿ ಸಮಿತಿಯ ಐವರ ವಿರುದ್ಧ ಪ್ರಕರಣ ದಾಖಲಾಗಿತ್ತು.
ಇದೀಗ ಪರಿಸ್ಥಿತಿ ತಿಳಿಗೊಳಿಸುವಲ್ಲಿ ಹಾಗೂ ಕಾನೂನು ಪಾಲನೆಯಲ್ಲಿ ಲೋಪ ಎಸಗಿದ ಆರೋಪದ ಮೇಲೆ ನಗರ ಠಾಣೆಯ ಮೂವರು ಪೊಲೀಸರ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಜೊತೆಗೆ ಗಂಗಾವತಿ ನಗರ ಠಾಣೆಯ ಪಿಐ ಆಗಿ ಹೆಚ್ಚುವರಿ ಪ್ರಭಾರ ವಹಿಸಿಕೊಳ್ಳುವಂತೆ ಮಂಜುನಾಥ್ ಎಂಬುವರಿಗೆ ಕೊಪ್ಪಳ ಎಸ್ಪಿ ಸೂಚಿಸಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


