ಸ್ಪೀಚ್ ಆ್ಯಂಡ್ ಹಿಯರಿಂಗ್ ಕೋರ್ಸ್ ಗಳನ್ನು ತೆಗೆದುಕೊಳ್ಳಿ: ವಿದ್ಯಾರ್ಥಿಗಳಿಗೆ ಸಚಿವ ಸುಧಾಕರ್ ಸಲಹೆ
ಹಿಂದುಳಿದವರು ಗೌರವಯುತ ಜೀವನ ನಡೆಸಲು ಸಹಾಯ ಮಾಡಲು ವಾಕ್ ಮತ್ತು ಶ್ರವಣದ ಕ್ಲಿನಿಕಲ್ ಕೋರ್ಸ್‌ಗಳನ್ನು ತೆಗೆದುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಶುಕ್ರವಾರ ಸಲಹೆ ನೀಡಿದರು.

ಬೆಂಗಳೂರು: ಹಿಂದುಳಿದವರು ಗೌರವಯುತ ಜೀವನ ನಡೆಸಲು ಸಹಾಯ ಮಾಡಲು ವಾಕ್ ಮತ್ತು ಶ್ರವಣದ ಕ್ಲಿನಿಕಲ್ ಕೋರ್ಸ್‌ಗಳನ್ನು ತೆಗೆದುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಶುಕ್ರವಾರ ಸಲಹೆ ನೀಡಿದರು.
ನಗರದ ಎಸ್.ಆರ್.ಚಂದ್ರಶೇಖರ್ ವಾಕ್ ಮತ್ತು ಶ್ರವಣ ಸಂಸ್ಥೆಯ 46ನೇ ಸಂಸ್ಥಾಪಕ ದಿನಾಚರಣೆ, ಪದವಿ ಪ್ರದಾನ ಸಮಾರಂಭ ಹಾಗೂ ದಾನಿಗಳ ಸಮಾವೇಶದಲ್ಲಿ ಸಚಿವರು ಮಾತನಾಡಿದರು.
ಸಾಕಷ್ಟು ಮಂದಿ ವೈದ್ಯಕೀಯ, ದಂತ ವೈದ್ಯಕೀಯ, ಕಾನೂನು ಮತ್ತು ವಾಣಿಜ್ಯದಂತಹ ಕೋರ್ಸ್ ಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಆದರೆ, ಸಮಾಜಕ್ಕೆ ಕೊಡುಗೆ ನೀಡುವುದನ್ನು ಯಾರೂ ಬಯಸುತ್ತಿಲ್ಲ. ಅಂಗವಿಕಲಿಗೆ ಸಹಾಯ ಮಾಡಲು ಹಾಗೂ ಅವರ ಆತ್ಮವಿಶ್ವಾಸ ತುಂಬರು ಸ್ಪೀಚ್ ಆ್ಯಂಡ್ ಹಿಯರಿಂಗ್ ಕೋರ್ಸ್ ಗಳನ್ನು ಆಯ್ಕೆ ಮಾಡಿಕೊಳ್ಳಿ. ನಗರಗಳು ಮತ್ತು ರಾಜ್ಯಗಳಾದ್ಯಂತ ಇಂತಹ ಹೆಚ್ಚಿನ ಸಂಸ್ಥೆಗಳನ್ನು ವಿದ್ಯಾರ್ಥಿಗಳು ತೆರೆಯಬೇಕು ಎಂದು ಹೇಳಿದರು. ಇದೇ ವೇಳೆ ಎಸ್‌ಆರ್ ಚಂದ್ರಶೇಖರ್ ಅವರ ಸಂಸ್ಥೆಯನ್ನು ಸಚಿವರು ಕೊಂಡಾಡಿದರು.
ಕಾರ್ಯಕ್ರಮದಲ್ಲಿ ದಾನಿಗಳು, ಇಎನ್‌ಟಿ ತಜ್ಞರನ್ನು ಸನ್ಮಾನಿಸಲಾಯಿತು. 20 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಶ್ರವಣಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಗಳನ್ನು ನೀಡಲಾಯಿತು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


