ದಾವಣಗೆರೆಯಲ್ಲಿ ಡಿ.24 ರಿಂದ ವೀರಶೈವ ಲಿಂಗಾಯತ ಸಮಾವೇಶ, ಲಕ್ಷಾಂತರ ಜನ ಸೇರುವ ನಿರೀಕ್ಷೆ!
ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ 24ನೇ ರಾಷ್ಟ್ರೀಯ ಸಮಾವೇಶವನ್ನು ಡಿ.23 ಮತ್ತು 24ರಂದು ದಾವಣಗೆರೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ಕಾರ್ಯದರ್ಶಿ ಈಶ್ವರ ಖಂಡ್ರೆ ಅವರು ಶುಕ್ರವಾರ ಹೇಳಿದರು.

ದಾವಣಗೆರೆ: ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ 24ನೇ ರಾಷ್ಟ್ರೀಯ ಸಮಾವೇಶವನ್ನು ಡಿ.23 ಮತ್ತು 24ರಂದು ದಾವಣಗೆರೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ಕಾರ್ಯದರ್ಶಿ ಈಶ್ವರ ಖಂಡ್ರೆ ಅವರು ಶುಕ್ರವಾರ ಹೇಳಿದರು.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನಗರದ ಬಾಪೂಜಿ ಎಂಬಿಎ ಕಾಲೇಜು ಆವರಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಈ ಹಿಂದೆ ಪ್ರತಿ 5 ವರ್ಷಗಳಿಗೊಮ್ಮೆ ನಡೆಯುತ್ತಿದ್ದ ಸಮಾವೇಶವನ್ನು ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ 2023 ರ ಆರಂಭಕ್ಕೆ ಮುಂದೂಡಲಾಗಿತ್ತು. ಆದರೆ, ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತ್ತೊಮ್ಮೆ ಮುಂದೂಡಲಾಗಿತ್ತು. ಇದೀಗ ಅಂತಿಮವಾಗಿ ಡಿ.23 ಮತ್ತು 24ರಂದು ದಾವಣಗೆರೆಯಲ್ಲಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಈ ನಡುವೆ ದಾವಣಗೆರೆಯಲ್ಲಿ ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ಮಹಾಸಭಾದ ಕಾರ್ಯಕಾರಿ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಕಾರ್ಯಕ್ರಮದ ವಿಧಾನಗಳ ಕುರಿತು ಚರ್ಚೆ ನಡೆಸಲಾಯಿತು ಎಂದು ತಿಳಿದುಬಂದಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಶಿವಶಂಕರಪ್ಪ ಅವರು, ವೀರಶೈವ-ಲಿಂಗಾಯತರಲ್ಲಿ ಒಗ್ಗಟ್ಟು ಮೂಡಿಸಲು ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಸರ್ಕಾರದಲ್ಲಿ ಲಿಂಗಾಯತರನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿದ್ದಿರಿ. ಈ ಹೇಳಿಕೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಿರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಹೋಗಿ ಸಿದ್ದರಾಮಯ್ಯ ಅವರನ್ನು ಕೇಳಿ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


