ಬೆಂಗಳೂರಿನಲ್ಲಿ ಪಟಾಕಿ ದುರಂತ: ಉನ್ನತ ಮಟ್ಟದ ತನಿಖೆಗೆ ಆದೇಶಿಸಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ; ಎಚ್‌ಡಿ ಕುಮಾರಸ್ವಾಮಿ
ಆನೇಕಲ್ ತಾಲೂಕಿನ ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ಸಂಭವಿದ ಅಗ್ನಿ ದುರಂತದಲ್ಲಿ 14 ಜನ ಕಾರ್ಮಿಕರು ಸಾವಿಗೆ ಸಂತಾಪ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ, ಘಟನೆ ಬಗ್ಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು ಎಂದು ಒತ್ತಾಯಿಸಿದ್ದಾರೆ.

ಬೆಂಗಳೂರು: ಆನೇಕಲ್ ತಾಲೂಕಿನ ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ಸಂಭವಿದ ಅಗ್ನಿ ದುರಂತದಲ್ಲಿ 14 ಜನ ಕಾರ್ಮಿಕರು ಸಾವಿಗೆ ಸಂತಾಪ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ, ಘಟನೆ ಬಗ್ಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು ಎಂದು ಒತ್ತಾಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಬೆಂಕಿ ಅವಘಡದಲ್ಲಿ 14 ಜನರು ಸಾವಿಗೀಡಾಗಿರುವ ಘಟನೆ ಬಗ್ಗೆ ತಿಳಿದು ನನಗೆ ತೀವ್ರ ದಿಗ್ಭ್ರಮೆ ಉಂಟಾಗಿದೆ. ದೀಪಾವಳಿಗೆ ಬದುಕು ಕಟ್ಟಿಕೊಳ್ಳಲು ಹೊರಟಿದ್ದ ಈ ಮುಗ್ಧ ಜೀವಗಳು ಬೆಂಕಿಯ ಕೆನ್ನಾಲಿಗೆಗೆ ಸಿಕ್ಕಿ ಬಲಿಯಾಗಿರುವ ಘಟನೆ ನನ್ನ ಮನವನ್ನು ಕಲಕಿದೆ ಎಂದಿದ್ದಾರೆ.
ಜೀವ ಕಳೆದುಕೊಂಡ ಎಲ್ಲಾ ನತದೃಷ್ಟ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಕುಟುಂಬಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸಂಭವಿಸಿರುವ ಈ ಘಟನೆ ಅನೇಕ ಪ್ರಶ್ನೆಗಳಿಗೆ ದಾರಿ ಮಾಡಿಕೊಟ್ಟಿದೆ. ಸುರಕ್ಷತೆ ಬಗ್ಗೆ ಮುನ್ನೆಚ್ಚರಿಕೆ ವಹಿಸದೆ ಇದ್ದಿದ್ದೇ ದುರಂತಕ್ಕೆ ಕಾರಣ ಎಂಬುದರಲ್ಲಿ ಎರಡು ಮಾತಿಲ್ಲ. ಈ ಬಗ್ಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು. ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಮುಂದೆ ಇಂತಹ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.
ಬದುಕು ಕಳೆದುಕೊಂಡ ಕುಟುಂಬಗಳಿಗೆ ರಾಜ್ಯ ಸರ್ಕಾರ ಆಸರೆಯಾಗಿ ನಿಲ್ಲಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


