ಬೆಳಗಾವಿ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ದಾಳಿ ಮಾಡಿ, ಶವವನ್ನು ಕಾಡಿಗೆ ಎಳೆದೊಯ್ದ ಕರಡಿ!
ಹೊಲದಲ್ಲಿ ಕೆಲಸ ಮಾಡುವಾಗ ಕರಡಿ ದಾಳಿಗೆ ಸಿಲುಕಿ ರೈತ ಸಾವಿಗೀಡಾಗಿರುವ ಘಟನೆ ಸೋಮವಾರ ಬೆಳಗಾವಿ ಜಿಲ್ಲೆಯ ಖಾನಾಪುರ ಸಮೀಪದ ಘೋಶೆ ಬದ್ರುಕ ಗ್ರಾಮದಲ್ಲಿ ನಡೆದಿದೆ. ಮೃತ ರೈತನನ್ನು 63 ವರ್ಷದ ಭೀಕಾಜಿ ಮಿರಾಶಿ ಎಂದು ಗುರುತಿಸಲಾಗಿದೆ.

ಬೆಳಗಾವಿ: ಹೊಲದಲ್ಲಿ ಕೆಲಸ ಮಾಡುವಾಗ ಕರಡಿ ದಾಳಿಗೆ ಸಿಲುಕಿ ರೈತ ಸಾವಿಗೀಡಾಗಿರುವ ಘಟನೆ ಸೋಮವಾರ ಬೆಳಗಾವಿ ಜಿಲ್ಲೆಯ ಖಾನಾಪುರ ಸಮೀಪದ ಘೋಶೆ ಬದ್ರುಕ ಗ್ರಾಮದಲ್ಲಿ ನಡೆದಿದೆ.
ಮೃತ ರೈತನನ್ನು 63 ವರ್ಷದ ಭೀಕಾಜಿ ಮಿರಾಶಿ ಎಂದು ಗುರುತಿಸಲಾಗಿದೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಕರಡಿ ದಾಳಿ ನಡೆಸಿದೆ. ಈ ವೇಳೆ ಹೊಲದಲ್ಲಿ ಇತರರು ಕೂಡ ಕೆಲಸ ಮಾಡುತ್ತಿದ್ದರು. ಇದನ್ನು ಲೆಕ್ಕಿಸದ ಕರಡಿ ದಾಳಿ ಮಾಡಿ, ರೈತನ ದೇಹವನ್ನು ಎರಡು ಕಿಲೋಮೀಟರ್ ದೂರದವರೆಗೆ ಅರಣ್ಯಕ್ಕೆ ಎಳೆದೊಯ್ದಿದೆ.
ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಇತರರ ಸಮ್ಮುಖದಲ್ಲಿಯೇ ಕರಡಿ ರೈತನ ಮೇಲೆ ದಾಳಿ ಮಾಡಿದೆ. ಈ ವೇಳೆ ಅವರು ಗಲಾಟೆ ಮಾಡಿ, ಕಲ್ಲು ಎಸೆದರೂ ಪ್ರಯೋಜನವಾಗಿಲ್ಲ.
ಭಾನುವಾರ ಈ ಘಟನೆ ನಡೆದಿದ್ದು, ಸ್ಥಳೀಯರಲ್ಲಿ ಆತಂಕ ಹಾಗೂ ಭಯ ಮೂಡಿಸಿದೆ. ಮೃತ ರೈತನ ಕುಟುಂಬಕ್ಕೆ ಪರಿಹಾರ ನೀಡಬೇಕು ಹಾಗೂ ಕಾಡುಪ್ರಾಣಿಗಳು ಗ್ರಾಮಗಳಿಗೆ ನುಗ್ಗದಂತೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಖಾನಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


