ಇನ್ನೂ 43 ತಾಲೂಕುಗಳು ಬರಪೀಡಿತ ಎಂದು ಘೋಷಿಸಿದ ರಾಜ್ಯ ಸರ್ಕಾರ
ಮೊದಲ ಹಂತದಲ್ಲಿ ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಎದುರಿಸುತ್ತಿರುವ 195 ತಾಲ್ಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಿದ್ದ ರಾಜ್ಯ ಸರ್ಕಾರ ಸೋಮವಾರ ಮತ್ತೆ 43 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ.

ಬೆಂಗಳೂರು: ಮೊದಲ ಹಂತದಲ್ಲಿ ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಎದುರಿಸುತ್ತಿರುವ 195 ತಾಲ್ಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಿದ್ದ ರಾಜ್ಯ ಸರ್ಕಾರ ಸೋಮವಾರ ಮತ್ತೆ 43 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ.
21 ಅತ್ಯಂತ ಬರಪೀಡಿತ ಮತ್ತು 22 ಸಾಧಾರಣ ಬರಪೀಡಿತ ಸೇರಿ ಹೆಚ್ಚುವರಿ 43 ತಾಲ್ಲೂಕುಗಳ ಬರ ಪೀಡಿತ ಎಂದು ಘೋಷಿಸಿ ಕಂದಾಯ ಇಲಾಖೆ ವಿಪತ್ತು ನಿರ್ವಹಣೆ ಜಂಟಿ ಕಾರ್ಯದರ್ಶಿ ಟಿ.ಸಿ.ಕಾಂತರಾಜ್ ಅವರು ಆದೇಶ ಹೊರಡಿಸಿದ್ದಾರೆ.
ಅತ್ಯಂತ ಬರಪೀಡಿತ ತಾಲ್ಲೂಕುಗಳು
ಚಾಮರಾಜನಗರ, ಯಳಂದೂರು, ಕೆ.ಆರ್.ನಗರ, ಬೆಳಗಾವಿ, ಖಾನಾಪುರ, ಮುಂಡರಗಿ, ಬ್ಯಾಡಗಿ, ಹಾನಗಲ್, ಶಿಗ್ಗಾಂ, ಕಲಘಟಗಿ, ಅಳ್ನಾವರ,ಅಣ್ಣಿಗೇರಿ, ಆಲೂರು, ಅರಸಿಕೆರೆ, ಹಾಸನ, ಮೂಡಿಗೆರೆ, ತರೀಕೆರೆ, ಪೊನ್ನಂಪೇಟೆ, ಹೆಬ್ರಿ, ಸಿದ್ದಾಪುರ, ದಾಂಡೇಲಿ.
ಸಾಧಾರಣ ಬರಪೀಡಿತ ತಾಲ್ಲೂಕುಗಳು
ಬೆಂಗಳೂರು ಉತ್ತರ, ಚನ್ನಪಟ್ಟಣ, ಮಾಗಡಿ, ಮಾಲೂರು, ತುಮಕೂರು, ಗುಂಡ್ಲುಪೇಟೆ, ಹನೂರು, ಕೊಳ್ಳೆಗಾಲ, ದೇವದುರ್ಗ, ಮಸ್ಕಿ, ಬೇಲೂರು, ಹೊಳೆನರಸೀಪುರ, ಸಕಲೇಶಪುರ, ಚನ್ನರಾಯಪಟ್ಟಣ, ಸೋಮವಾರಪೇಟೆ, ಕೊಪ್ಪ, ನರಸಿಂಹರಾಜಪುರ, ಶೃಂಗೇರಿ,ಮಂಗಳೂರು, ಮೂಡಬಿದಿರೆ, ಬ್ರಹ್ಮಾವರ, ಕಾರವಾರ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


