ಒಬ್ಬ ಎಂಎಲ್‌ಎ ಬಿಗ್ ಬಾಸ್‌ಗೆ ಹೋಗಿ ಕುಣಿದಾಡಿರುವುದು ಇದೇ ಮೊದಲು, ಪ್ರದೀಪ್ ಈಶ್ವರ್ ಚಿಕ್ಕಬಳ್ಳಾಪುರದ ಮಾನ ಮರ್ಯಾದೆ ಕಳೆದಿದ್ದಾರೆ: ಡಾ ಸುಧಾಕರ್
ಕನ್ನಡ ಬಿಗ್ ಬಾಸ್ ಸೀಸನ್ 10’ ಆರಂಭ ಆಗಿದೆ. ವಿವಿಧ ಸ್ಪರ್ಧಿಗಳು ದೊಡ್ಮನೆಗೆ ಎಂಟ್ರಿ ನೀಡಿದ್ದಾರೆ. ಒಂದು ದಿನ ತಡವಾಗಿ ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಅವರು ಬಿಗ್ ಬಾಸ್ ಮನೆಗೆ ಕಾಲಿಟ್ಟಿದ್ದಾರೆ.

ಬೆಂಗಳೂರು: ಕನ್ನಡ ಬಿಗ್ ಬಾಸ್ ಸೀಸನ್ 10’ ಆರಂಭ ಆಗಿದೆ. ವಿವಿಧ ಸ್ಪರ್ಧಿಗಳು ದೊಡ್ಮನೆಗೆ ಎಂಟ್ರಿ ನೀಡಿದ್ದಾರೆ. ಒಂದು ದಿನ ತಡವಾಗಿ ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಅವರು ಬಿಗ್ ಬಾಸ್ ಮನೆಗೆ ಕಾಲಿಟ್ಟಿದ್ದಾರೆ.
ಅವರ ಎಂಟ್ರಿ ಅನೇಕರಿಗೆ ಅಚ್ಚರಿ ತಂದಿದೆ. ಎಂಎಲ್‌ಎ ಆಗಿ ದೊಡ್ಮನೆಗೆ ತೆರಳಿರೋ ಬಗ್ಗೆ ಕೆಲವರು ಅಪಸ್ವರ ತೆಗೆದಿದ್ದಾರೆ. ಅವರು ಬಿಗ್ ಬಾಸ್ ಮನೆಗೆ ಕೆಲವು ದಿನಗಳ ಅತಿಥಿಯಾಗಿ ಹೋಗಿದ್ದಾರೆಯೋ ಅಥವಾ ಉಳಿದ ಸ್ಪರ್ಧಿಗಳಂತೆಯೇ ಅವರು ಇರುತ್ತಾರಾ ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿದೆ.
ಈ ವರ್ಷ ವಿಧಾನಸಭೆ ಚುನಾವಣೆಯಲ್ಲಿ ಪ್ರದೀಪ್ ಈಶ್ವರ್ ಪ್ರಬಲ ಪ್ರತಿಸ್ಪರ್ಧಿ ಬಿಜೆಪಿಯ ಡಾಕ್ಟರ್ ಸುಧಾಕರ್ ಅವರನ್ನು ಸೋಲಿಸಿದ್ದಾರೆ. ಈ ಬಗ್ಗೆ ಇಂದು ಸುದ್ದಿಗೋಷ್ಠಿಯಲ್ಲಿ ಡಾ ಸುಧಾಕರ್ ಪ್ರದೀಪ್ ಈಶ್ವರ್ ಅವರನ್ನು ಲೇವಡಿ ಮಾಡಿದ್ದಾರೆ.
ಒಬ್ಬ ರಾಜಕಾರಣಿ, ಜನಪ್ರತಿನಿಧಿಯಾಗಿ ಶಾಸಕರಾಗಿ ಈ ರೀತಿಯ ಶೋಗೆ ಹೋಗಿದ್ದು ಇದೆ ಮೊದಲು, ಬಿಗ್ ಬಾಸ್‌ಗೆ ಹೋಗುವ ಮೂಲಕ ನಗೆಪಾಟೀಲಿಗೆ ಈಡಾಗಿದ್ದಾರೆ. ಒಬ್ಬ ಎಂಎಲ್‌ಎ ಬಿಗ್ ಬಾಸ್‌ಗೆ ಹೋಗಿ ಕುಣಿದಾಡಿರುವುದು ಇದೇ ಮೊದಲು. ಇದೊಂದು ನಾಚಿಕೆಗೇಡಿನ ಸಂಗತಿ. ಬಿಗ್ ಬಾಸ್‌ನಲ್ಲಿ ಭಾಗಿಯಾಗುವ ಮೂಲಕ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಾನ ಮರ್ಯಾದೆ ಕಳೆದಿದ್ದಾರೆ ಎಂದು ಸುಧಾಕರ್ ವ್ಯಂಗ್ಯವಾಡಿದರು.
ಇದನ್ನೂ ಓದಿ: ಕಲರ್ ಫುಲ್ ಮನೆಗೆ ತಾಳ್ಮೆಯ ಬಿಳುಪು: ಎಂಟ್ರಿ ಕೊಟ್ರು ಎಮ್.ಎಲ್.ಎ ಪ್ರದೀಪು; ಬಿಗ್ ಬಾಸ್ ಮನೆಯಲ್ಲಿ ಪ್ರದೀಪ್ ಈಶ್ವರ್!
ಆಯ್ಕೆ ತಪ್ಪು ಎಂದು ಜನರಿಗೆ ಮನವರಿಕೆಯಾಗಿದೆ: ಚಿಕ್ಕಬಳ್ಳಾಪುರ ಕ್ಷೇತ್ರದ ಹೆಸರನ್ನು ಹಾಳು ಮಾಡಿದ್ದಾರೆ. ಇಂತಹ ವ್ಯಕ್ತಿಯನ್ನು ಆಯ್ಕೆ ಮಾಡಿದ ಜನರಿಗೆ ಆಗಲೇ ಮನವರಿಕೆಯಾಗಿದೆ. ನಾವು ತಪ್ಪು ಮಾಡಿದ್ದೇವೆ ಎಂದು ಜನರಿಗೆ ಅರಿವಾಗಿದೆ. ಮುಂದಿನ ದಿನಗಳಲ್ಲಿ ಅವರಿಗೆ ತಕ್ಕಪಾಠ ಕಲಿಸಲಿದ್ದಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


