ಗಣೇಶ ವಿಸರ್ಜನಾ ಮೆರವಣಿಗೆಗೆ ಅವಕಾಶ ನೀಡದಿರಲು ಬೆಂಗಳೂರು ಪೊಲೀಸರ ನಿರ್ಧಾರ
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಇತ್ತೀಚಿನ ದಿನಗಳಲ್ಲಿ ಗಲಭೆ, ಅಹಿತಕರ ಘಟನೆಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸರು ಗಣೇಶ ವಿಸರ್ಜನಾ ಮೆರವಣಿಗೆಗೆ ಅನುಮತಿ ನೀಡದೇ ಇರಲು ನಿರ್ಧರಿಸಿದ್ದಾರೆ.

ನವದೆಹಲಿ: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಇತ್ತೀಚಿನ ದಿನಗಳಲ್ಲಿ ಗಲಭೆ, ಅಹಿತಕರ ಘಟನೆಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸರು ಗಣೇಶ ವಿಸರ್ಜನಾ ಮೆರವಣಿಗೆಗೆ ಅನುಮತಿ ನೀಡದೇ ಇರಲು ನಿರ್ಧರಿಸಿದ್ದಾರೆ.
ನರದಾದ್ಯಂತ ಮೆರವಣಿಗೆ, ಡಿಜೆ ನೃತ್ಯಗಳಿಗೆ ಅನುಮತಿ ನೀಡದೇ ಇರಲು ಎಲ್ಲಾ ಪೊಲೀಸ್ ಠಾಣೆಗಳಿಗೆ ಪೊಲೀಸ್ ಆಯುಕ್ತ ಬಿ ದಯಾನಂದ್ ಸೂಚನೆ ನೀಡಿದ್ದಾರೆ.
ಒಂದು ವೇಳೆ ಅನುಮತಿ ಇಲ್ಲದೇ ಗಣೇಶ ಮೆರವಣಿಗೆ ನಡೆದದ್ದೇ ಆದಲ್ಲಿ ಆ ಘಟನೆ ನಡೆದ ವ್ಯಾಪ್ತಿಯ ಇನ್ಸ್ ಪೆಕ್ಟರ್ ನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ದಯಾನಂದ್ ಎಚ್ಚರಿಕೆ ನೀಡಿದ್ದಾರೆ.
ಗಣೇಶ ಮೆರವಣಿಗೆ ವೇಳೆ ನಗರದಲ್ಲಿ ಕೆಲವೆಡೆ ಗದ್ದಲ ಉಂಟಾದ ಘಟನೆಗಳು ಇತ್ತೀಚೆಗೆ ವರದಿಯಾಗಿದ್ದವು. ಹಲಸೂರು, ಯೆಡಿಯೂರು, ಆಡುಗೋಡಿಗಳಲ್ಲಿ ಘರ್ಷಣೆ ಉಂಟಾಗಿದ್ದವು. ಗಣೇಶ ವಿಸರ್ಜನೆಯ ವೇಳೆ ಉಂಟಾದ ಘರ್ಷಣೆಯಲ್ಲಿ ಆಡುಗೋಡಿಯಲ್ಲಿ ಶ್ರೀನಿವಾಸ್ ಎಂಬಾತನನ್ನು ಇರಿದು ಹತ್ಯೆ ಮಾಡಲಾಗಿತ್ತು. ಇದಷ್ಟೇ ಅಲ್ಲದೇ ಮೆರವಣಿಗೆ ವೇಳೆ ಒಂದು ಆಡು ಸಹ ಸಾವನ್ನಪ್ಪಿತ್ತು.
ಹಬ್ಬ ಮುಗಿದರೂ ಘರ್ಷಣೆ ಹಾಗೂ ವ್ಯಕ್ತಿಯ ಹತ್ಯೆಯ ಹಿನ್ನೆಲೆಯಲ್ಲಿ ನಗರದಾದ್ಯಂತ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ಮೆರವಣಿಗೆಗೆ ಅನುಮತಿ ನೀಡದಿರಲು ಪೊಲೀಸ್ ಇಲಾಖೆ ಅಧಿಕಾರಿಗಳು ನಿರ್ಧರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


