ಕೊಪ್ಪಳ: ಗಣೇಶ ವಿಸರ್ಜನೆ ವೇಳೆ ಡಿ.ಜೆ ಸೌಂಡ್; ಹೃದಯಾಘಾತದಿಂದ ಯುವಕ ಸಾವು
ಡಿಜೆ ಸಂಗೀತಕ್ಕೆ ಯುವಸಮೂಹ ಡ್ಯಾನ್ಸ್ ಮಾಡುತ್ತಿತ್ತು. ಈ ಸಂದರ್ಭದಲ್ಲಿ ಡ್ಯಾನ್ಸ್ ಮಾಡುತ್ತಲೇ ಯುವಕನೊಬ್ಬ ಹಠಾತ್ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದಿದೆ.

ಕೊಪ್ಪಳ: ಡಿಜೆ ಸಂಗೀತಕ್ಕೆ ಯುವಸಮೂಹ ಡ್ಯಾನ್ಸ್ ಮಾಡುತ್ತಿತ್ತು. ಈ ಸಂದರ್ಭದಲ್ಲಿ ಡ್ಯಾನ್ಸ್ ಮಾಡುತ್ತಲೇ ಯುವಕನೊಬ್ಬ ಹಠಾತ್ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದಿದೆ.
ಸುದೀಪ್ ಸಜ್ಜನ್ (30) ಮೃತ ಯುವಕ. ಈತನಿಗೆ ಡಿಜೆ ಸೌಂಡ್ ಗೆ ಡ್ಯಾನ್ಸ್ ಮಾಡುತ್ತಿದ್ದ ವೇಳೆ ಹೃದಯಾಘಾತವಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ 21 ದಿನದ ಗಣೇಶ ವಿಸರ್ಜನೆ ನಡೆದಿದೆ. ಗಂಗಾವತಿಯ ಪ್ರಶಾಂತ ನಗರದ ಯುವಕರಿಂದ ಡಿಜೆ ಮೆರವಣಿಗೆ ಆಯೋಜನೆ ಮಾಡಲಾಗಿತ್ತು. ಅಂತೆಯೇ ಬೆಳ್ಳಂಬೆಳಗ್ಗೆ ಮೆರವಣಿಗೆ ಸಂದರ್ಭದಲ್ಲಿ ಡಿಜೆ ಸೌಂಡ್ ಹಾಕಿ ಡ್ಯಾನ್ಸ್ ಮಾಡಲಾಗುತ್ತಿತ್ತು.
ಇದನ್ನೂ ಓದಿ: ಬೆಂಗಳೂರು: ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ, ಯುವಕ ಸಾವು
ಮೆರವಣಿಗೆ ಸಾಗುತ್ತಿದ್ದ ವೇಳೆ ಸುದೀಪ್ ಡ್ಯಾನ್ಸ್ ಮಾಡುತ್ತಿದ್ದು, ಕೆಲ ಹೊತ್ತಿನ ಬಳಿಕ ಕುಸಿದು ಬಿದ್ದಿದ್ದಾನೆ. ಘಟನೆಯಿಂದ ಸ್ವಯಂ ಪ್ರೇರಿತವಾಗಿ ಯುವಕರು ಅರ್ಧಕ್ಕೆ ಡಿಜೆ ಬಂದ್ ಮಾಡಿದರು. ಯುವಕನ ಮೃತ ದೇಹ ಗಂಗಾವತಿ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಗಂಗಾವತಿಯ ಪ್ರಶಾಂತ ನಗರದ ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ನಿನ್ನೆ ಇದ್ದ ಹಿನ್ನೆಲೆಯಲ್ಲಿ ಮೆರವಣಿಗೆಗೆ ಮಹಾರಾಷ್ಟ್ರದಿಂದ ಡಿಜೆ ತರಿಸಲಾಗಿತ್ತು. ಡಿಜೆ ಸಂಗೀತಕ್ಕೆ ಯುವಸಮೂಹ ಡ್ಯಾನ್ಸ್ ಮಾಡುತ್ತಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


