ಬೆಳಗಾವಿ: ಗಾಂಧಿ ಜಯಂತಿ ವೇಳೆ ಡಿಎಚ್‌ಒ ಕಚೇರಿಯಲ್ಲಿ ಎಣ್ಣೆ ಪಾರ್ಟಿ ಮಾಡಿದ್ದ 7 ಮಂದಿ ನೌಕರರ ಅಮಾನತು
ನಗರದ ಟಿಳಕವಾಡಿಯ ವ್ಯಾಕ್ಸಿನ್ ಡಿಪೋ ಆವರಣದ ಜಿಲ್ಲಾ ಆರೋಗ್ಯಾಧಿಕಾರಿ ಕಾರ್ಯಾಲಯದ ಹಿಂದಿನ ಕಚೇರಿಯಲ್ಲೇ ಎಣ್ಣೆ ಪಾರ್ಟಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

ಬೆಳಗಾವಿ: ನಗರದ ಟಿಳಕವಾಡಿಯ ವ್ಯಾಕ್ಸಿನ್ ಡಿಪೋ ಆವರಣದ ಜಿಲ್ಲಾ ಆರೋಗ್ಯಾಧಿಕಾರಿ ಕಾರ್ಯಾಲಯದ ಹಿಂದಿನ ಕಚೇರಿಯಲ್ಲೇ ಎಣ್ಣೆ ಪಾರ್ಟಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.
ಡಿಎಚ್‌ಒ ಅವರ ಕಾರು ಚಾಲಕ ಮಂಜುನಾಥ ಪಾಟೀಲ, ಮಹೇಶ ಹಿರೇಮಠ, ರಮೇಶ ನಾಯಿಕ, ಸತ್ಯಪ್ಪ ತಮ್ಮನ್ನವರ, ಅನಿಲ ತಿಪ್ಪನ್ನವರ, ದೀಪಕ ಗಾವಡೆ, ಯಲ್ಲಪ್ಪ ಮುನ್ನವಳ್ಳಿ ಎಂಬ ನೌಕರರನ್ನು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಹೇಶ ಕೋಣಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಪಾರ್ಟಿ ಮಾಡಿರುವ ನೌಕರರಲ್ಲೇ ಒಬ್ಬರು ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಗಾಂಧಿ ಜಯಂತಿ ದಿನ ಕಚೇರಿಯಲ್ಲೇ ಗಾಂಧೀಜಿ ಭಾವಚಿತ್ರದ ಎದುರು ಕುಡಿದು ಕುಪ್ಪಳಿಸಿರುವುದು, ಹಾಡು, ಡಾನ್ಸ್, ಹರಟೆ ಹೊಡೆದಿರುವುದು ವಿಡಿಯೋದಲ್ಲಿ ಕಂಡು ಬಂದಿತ್ತು. ಇದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.
ಗಾಂಧಿ ಜಯಂತಿ ದಿನ ಮದ್ಯ, ಮಾಂಸ ಮಾರಾಟ ನಿಷೇಧವಿರುತ್ತದೆ. ಆದರೆ, ಆರೋಗ್ಯ ಇಲಾಖೆ ಸಿಬ್ಬಂದಿ ಪಾರ್ಟಿ ಮಾಡಿರುವುದು ಆಕ್ರೋಶಕ್ಕೆ ಕಾರಣವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


