ಕಠಿಣ ಎಚ್ಚರಿಕೆ ನಡುವೆಯೂ ನೈತಿಕ ಪೊಲೀಸ್ಗಿರಿ: ಹಿಂದೂ ಬಾಲಕಿಯೊಂದಿಗಿದ್ದ ಇಬ್ಬರು ಮುಸ್ಲಿಂ ಹುಡುಗರಿಗೆ ತರಾಟೆ
ಸಿದ್ದರಾಮಯ್ಯ ಸರ್ಕಾರದ ಕಟ್ಟುನಿಟ್ಟಿನ ಎಚ್ಚರಿಕೆ ಮತ್ತು ವಿಶೇಷ ವಿಭಾಗ ಸ್ಥಾಪನೆಯ ನಡುವೆಯೂ, ಕೋಮು ಸೂಕ್ಷ್ಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ನೈತಿಕ ಪೊಲೀಸ್ಗಿರಿ ಪ್ರಕರಣ ವರದಿಯಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಮಂಗಳೂರು: ಸಿದ್ದರಾಮಯ್ಯ ಸರ್ಕಾರದ ಕಟ್ಟುನಿಟ್ಟಿನ ಎಚ್ಚರಿಕೆ ಮತ್ತು ವಿಶೇಷ ವಿಭಾಗ ಸ್ಥಾಪನೆಯ ನಡುವೆಯೂ, ಕೋಮು ಸೂಕ್ಷ್ಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ನೈತಿಕ ಪೊಲೀಸ್ಗಿರಿ ಪ್ರಕರಣ ವರದಿಯಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಮಂಗಳೂರು ನಗರ ಸಮೀಪದ ಬಂಟ್ವಾಳ ತಾಲೂಕಿನ ಪೆರುವಾಯಿ ಬಳಿ ಗುರುವಾರ ಈ ಘಟನೆ ನಡೆದಿದೆ. ಬಸ್ ನಿಲ್ದಾಣದಲ್ಲಿ ಹಿಂದೂ ಬಾಲಕಿಯ ಜೊತೆಗೆ ನಿಂತಿದ್ದ ಇಬ್ಬರು ಮುಸ್ಲಿಂ ಹುಡುಗರನ್ನು ಸ್ಥಳೀಯ ಗುಂಪೊಂದು ಪ್ರಶ್ನಿಸಿದೆ.
ಈ ಮೂವರು ಬಸ್ ನಿಲ್ದಾಣದಲ್ಲಿ ನಿಂತಿರುವುದನ್ನು ಕಂಡು ಸ್ಥಳೀಯ ಗುಂಪೊಂದು ಅವರ ಚಲನವಲನದ ಬಗ್ಗೆ ಅನುಮಾನ ವ್ಯಕ್ತಪಡಿಸಿದೆ. ಕುದ್ದುಪದವು ಕಡೆಯಿಂದ ಬಸ್ನಲ್ಲಿ ಬಂದು ಕೇರಳದ ಕಾಸರಗೋಡಿನ ಉಪ್ಪಳಕ್ಕೆ ತೆರಳಲು ಅವರು ಕಾಯುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳೀಯರು ಅವರನ್ನು ಪ್ರಶ್ನಿಸಿ ವಿಡಿಯೋ ರೆಕಾರ್ಡ್ ಮಾಡಿದ್ದಾರೆ. ಹುಡುಗರು ತಾವು ವಿದ್ಯಾರ್ಥಿಗಳಾಗಿದ್ದು, ಪರಸ್ಪರ ಪರಿಚಯವಿದೆ ಎಂದು ಹೇಳಿದ್ದಾರೆ. ಆದರೂ, ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಬಳಿಕ ವಿಟ್ಲ ಪೊಲೀಸರು ಅವರನ್ನು ಠಾಣೆಗೆ ಕರೆದೊಯ್ದು ಪ್ರಾಥಮಿಕ ವಿಚಾರಣೆ ಬಳಿಕ ಬಿಡುಗಡೆ ಮಾಡಿದ್ದಾರೆ. ತಾವು ಕಾಸರಗೋಡು ಜಿಲ್ಲೆಯ ಪೆರ್ಲ ನಿವಾಸಿಗಳೆಂದು ಬಾಲಕರು ಪೊಲೀಸರಿಗೆ ತಿಳಿಸಿದ್ದಾರೆ.
ಈ ನಡುವೆ ಬಾಲಕರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


