ರಾಜ್ಯ

ಸಚಿವ ಮಹದೇವಪ್ಪ ಹೆಸರಿನಲ್ಲಿ ನಕಲಿ ಲೆಟರ್‌ಹೆಡ್‌: ಆರೋಪಿ ಬಂಧನ

ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್‌.ಸಿ.ಮಹದೇವಪ್ಪ ಅವರ ಹೆಸರಿನಲ್ಲಿ ನಕಲಿ ಲೆಟರ್‌ಹೆಡ್‌ ಸೃಷ್ಟಿಸಿ ದುರ್ಬಳಕೆ ಮಾಡಿಕೊಂಡಿದ್ದ ಆರೋಪಿಯೊಬ್ಬನನ್ನು ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ.

ಸಚಿವ ಮಹದೇವಪ್ಪ ಹೆಸರಿನಲ್ಲಿ ನಕಲಿ ಲೆಟರ್‌ಹೆಡ್‌: ಆರೋಪಿ ಬಂಧನ
ಸಂಗ್ರಹ ಚಿತ್ರ
Published On :

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್‌.ಸಿ.ಮಹದೇವಪ್ಪ ಅವರ ಹೆಸರಿನಲ್ಲಿ ನಕಲಿ ಲೆಟರ್‌ಹೆಡ್‌ ಸೃಷ್ಟಿಸಿ ದುರ್ಬಳಕೆ ಮಾಡಿಕೊಂಡಿದ್ದ ಆರೋಪಿಯೊಬ್ಬನನ್ನು ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ.

ಮೈಸೂರು ಮೂಲದ ಮಹಾದೇವ ಬಂಧಿತ ಆರೋಪಿಯಾಗಿದ್ದಾರೆ. ಸಚಿವರ ಕಚೇರಿಯ ಆಪ್ತ ಕಾರ್ಯದರ್ಶಿ ಸಿ.ಎಂ.ರಾಜೇಂದ್ರ ಅವರು ನೀಡಿದ ದೂರು ಆಧರಿಸಿ ಆರೋಪಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

‘ಆರೋಪಿ, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ, ಭೋವಿ ಅಭಿವೃದ್ಧಿ ನಿಗಮಗಳ ವ್ಯವಸ್ಥಾಪಕರಿಗೆ ಸಚಿವರ ಶಿಫಾರಸು ಇರುವಂತೆ ಲೆಟರ್‌ಹೆಡ್‌ ಸೃಷ್ಟಿಸಿದ್ದ. ಸಚಿವರ ನಕಲಿ ಸಹಿ ಮಾಡಿದ್ದ. ಸಮುದಾಯದ 20 ಮಂದಿಗೆ ಸಾಲ ಸೌಲಭ್ಯ ನೀಡುವಂತೆಯೂ ಪತ್ರದಲ್ಲಿ ಉಲ್ಲೇಖಿಸಿ ನಿಗಮಗಳ ವ್ಯವಸ್ಥಾಪಕರಿಗೆ ಇದೇ ನಕಲಿ ಪತ್ರವನ್ನು ಸಲ್ಲಿಸಿದ್ದ.

ಇದೇ ಲೆಟರ್‌ಹೆಡ್‌ನಲ್ಲಿ ಪತ್ರವನ್ನು ಸಚಿವರ ಕಚೇರಿಗೂ ತಲುಪಿಸಿದ್ದ. ಆ ಪತ್ರವನ್ನು ನೋಡಿ ಅನುಮಾನಗೊಂಡ ರಾಜೇಂದ್ರ ಅವರು ಪರಿಶೀಲನೆ ನಡೆಸಿದಾಗ ನಕಲಿ ಎಂಬುದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.