ರಾಮನಗರ: ಎಕ್ಸ್ ಪ್ರೆಸ್ ವೇಯಲ್ಲಿ ಅಪಘಾತ; ಓವರ್ ಟೇಕ್ ಮಾಡಲು ಹೋಗಿ ಲಾರಿಗೆ ಗುದ್ದಿದ ಓಮಿನಿ ಕಾರು- ಇಬ್ಬರ ದುರ್ಮರಣ
ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಐದು ಮಂದಿ ಗಾಯಗೊಂಡಿದ್ದಾರೆ.

ರಾಮನಗರ: ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಐದು ಮಂದಿ ಗಾಯಗೊಂಡಿದ್ದಾರೆ.
ರಾಮನಗರ ತಾಲೂಕಿನ ಕೆಂಪೇಗೌಡನದೊಡ್ಡಿ ಬಳಿ ದುರ್ಘಟನೆ ನಡೆದಿದೆ. ಬೆಂಗಳೂರನಿಂದ ಮೈಸೂರು ಕಡೆ ಹೋಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ಒಮ್ನಿ ಡಿಕ್ಕಿ ಹೊಡೆದಿದೆ. ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಹಿಂಬದಿಯಿಂದ ಒಮ್ನಿ ಡಿಕ್ಕಿ ಹೊಡೆದಿದೆ. ಗುದ್ದಿದ ರಭಸಕ್ಕೆ ಒಮ್ನಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಒಮ್ನಿಯಲ್ಲಿ 7 ಮಂದಿ ಪ್ರಯಾಣಿಸುತ್ತಿದ್ದರು. ಸ್ಥಳದಲ್ಲೇ ಇಬ್ಬರು ಸಾವಿಗೀಡಾಗಿದ್ದು, ಒಬ್ಬ ಮಹಿಳೆಗೆ ಗಂಭೀರ ಗಾಯಗಳಾಗಿವೆ. ಮಕ್ಕಳು ಸೇರಿದಂತೆ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ರಾಜೇಶ್ (42), ಉಮಾ (35) ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ದೈವಿಗಳು. ಬೆಂಗಳೂರಿನ ಪೀಣ್ಯ ಮೂಲದವರಾಗಿರುವ ರಾಜೇಶ್ ಕುಟುಂಬ ಮೈಸೂರು ಕಡೆಗೆ ತೆರಳುತ್ತಿತ್ತು.
ಅಪಘಾತದ ಹಿನ್ನೆಲೆಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಆಗಿತ್ತು. ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


