ವಿಡಿಯೋ: ಹಾವು ಹಿಡಿಯುವ ವೇಳೆ ಕಚ್ಚಿದ ನಾಗರಹಾವು, ಉರಗ ರಕ್ಷಕ ಆಸ್ಪತ್ರೆಗೆ ದಾಖಲು, ಸ್ಥಿತಿ ಗಂಭೀರ!
ಹಾವು ಹಿಡಿಯುವ ವೇಳೆ ಅವಘಡ ಸಂಭವಿಸಿ ನಾಗರಹಾವೊಂದು ಉರಗ ರಕ್ಷಕನಿಗೇ ಕಚ್ಚಿದ ಪರಿಣಾಮ ಆತನ ಪರಿಸ್ಥಿತಿ ಗಂಭೀರವಾಗಿ ಆತ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹೊನ್ನಾವರ: ಹಾವು ಹಿಡಿಯುವ ವೇಳೆ ಅವಘಡ ಸಂಭವಿಸಿ ನಾಗರಹಾವೊಂದು ಉರಗ ರಕ್ಷಕನಿಗೇ ಕಚ್ಚಿದ ಪರಿಣಾಮ ಆತನ ಪರಿಸ್ಥಿತಿ ಗಂಭೀರವಾಗಿ ಆತ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗುಂಡಬಾಳ ಹತ್ತಿರದ ಮನೆಯೊಂದರಲ್ಲಿ ಬಂದಿದ್ದ ನಾಗರಹಾವನ್ನು ಹಿಡಿಯಲು ಹೋದ ಉರಗ ತಜ್ಞನಿಗೆ ಹಾವು ಕಡಿದ ಪರಿಣಾಮ ಆಸ್ಪತ್ರೆಗೆ ದಾಖಲಿಸಿದ ಘಟನೆ ಸಂಭವಿಸಿದೆ.
ರಾತ್ರಿ ಸಮಯದಲ್ಲಿ ಮನೆಯ ಸಮೀಪ ಕಾಣಿಸಿಕೊಂಡ ನಾಗರಹಾವು ಹೋಗದೆ ಇರುವುದರಿಂದ ಉರಗ ತಜ್ಞ ಅಬು ತಲಾ ಅವರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.
ವಿಷಯ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಉರಗ ತಜ್ಞ ಅಬು ತಲಾ ಹಾವಿನ ರಕ್ಷಣೆಗೆ ಮುಂದಾಗಿದ್ದಾರೆ. ಹಾವನ್ನು ಹಿಡಿಯುವಾಗ ಅಕಸ್ಮಾತಾಗಿ ಕೈ ಭಾಗಕ್ಕೆ ಹಾವು ಕಚ್ಚಿದೆ. ಆದರು ಹಾವನ್ನು ಹಿಡಿದ್ದಾರೆ. ನಂತರ ತಾಲೂಕು ಆಸ್ಪತ್ರೆಗೆ ಕರೆದೊಯ್ದರು ಸ್ಥಿತಿ ಗಂಭೀರವಾಗಿರುದರಿಂದ ಕೂಡಲೇ ಉಡುಪಿಯ ಆದರ್ಶ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇವರ ಸ್ಥಿತಿ ಗಂಭೀರವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


