ಸಂಚಾರ ನಿಯಮ ಉಲ್ಲಂಘನೆ: 772 ಡ್ರೈವಿಂಗ್ ಲೈಸೆನ್ಸ್ ಅಮಾನತುಗೊಳಿಸಿದ ಬೆಂಗಳೂರು ಸಂಚಾರ ಪೊಲೀಸರು
ಸಂಚಾರ ನಿಯಮ ಉಲ್ಲಂಘಿಸುವವರಿಗೆ ಪ್ರಬಲ ಸಂದೇಶ ರವಾನಿಸುವ ನಿಟ್ಟಿನಲ್ಲಿ, ಬೆಂಗಳೂರು ಸಂಚಾರ ಪೊಲೀಸರು ಈ ವರ್ಷದ ಜನವರಿಯಿಂದ ಸೆಪ್ಟೆಂಬರ್ ವರೆಗೆ 772 ಜನರ ಡ್ರೈವಿಂಗ್ ಲೈಸೆನ್ಸ್ ಅಮಾನತುಗೊಳಿಸಿದ್ದಾರೆ.

ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸುವವರಿಗೆ ಪ್ರಬಲ ಸಂದೇಶ ರವಾನಿಸುವ ನಿಟ್ಟಿನಲ್ಲಿ, ಬೆಂಗಳೂರು ಸಂಚಾರ ಪೊಲೀಸರು ಈ ವರ್ಷದ ಜನವರಿಯಿಂದ ಸೆಪ್ಟೆಂಬರ್ ವರೆಗೆ 772 ಜನರ ಡ್ರೈವಿಂಗ್ ಲೈಸೆನ್ಸ್ ಅಮಾನತುಗೊಳಿಸಿದ್ದಾರೆ.
ಭಾರೀ ಸದ್ದು ಮಾಡುವ ಸೈಲೆನ್ಸರ್‌ಗಳಂತಹ ಅಕ್ರಮ ಪರಿಕರಗಳ ಅಳವಡಿಕೆಗಾಗಿ ಎಂಟು ವಾಹನಗಳ ನೋಂದಣಿ ಪ್ರಮಾಣಪತ್ರಗಳನ್ನು (ಆರ್‌ಸಿ) ಸಾರಿಗೆ ಇಲಾಖೆ ರದ್ದುಗೊಳಿಸಿದೆ. ವಿವಿಧ ರೀತಿಯ ಉಲ್ಲಂಘನೆಗಳಿಗಾಗಿ 1,700 ಪರವಾನಗಿಗಳನ್ನು ಅಮಾನತುಗೊಳಿಸಲು ಸಂಚಾರ ಇಲಾಖೆಗೆ ಶಿಫಾರಸು ಮಾಡಿರುವುದಾಗಿ ಬೆಂಗಳೂರು ನಗರ ಜಂಟಿ ಪೊಲೀಸ್ (ಸಂಚಾರ), ಎಂಎನ್ ಅನುಚೇತ್ ದಿ ನ್ಯೂ ಸಂಡೆ ಎಕ್ಸ್‌ಪ್ರೆಸ್ ಗೆ ತಿಳಿಸಿದ್ದಾರೆ.
ಇದರಲ್ಲಿ ಹೆಚ್ಚಿನವು ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಮತ್ತು 172 ವ್ಹೀಲಿಂಗ್ ಮತ್ತು ಅಪಾಯಕಾರಿ ಚಾಲನೆಗಾಗಿ ಅಮಾನತು ಮಾಡಲಾಗಿದೆ. ಇದಲ್ಲದೆ, ವಾಹನಗಳ ಮಾರ್ಪಾಡು ಮತ್ತು ಇತರರಿಗೆ ತೊಂದರೆಯಾಗುವ ಶಬ್ದದ ಸೈಲೆನ್ಸರ್‌ಗಳನ್ನು ಅಳವಡಿಸಿದ್ದ ಕಾರಣ ಸಂಚಾರ ವಿಭಾಗವು ಎಂಟು ಆರ್‌ಸಿಗಳನ್ನು ರದ್ದುಗೊಳಿಸಿದೆ ಎಂದು ಅವರು ವಿವರಿಸಿದರು.
ಶೇ. 50 ರಷ್ಟು ಪ್ರಕರಣಗಳಲ್ಲಿ, ಅಪ್ರಾಪ್ತ ವಯಸ್ಕರು ವ್ಹೀಲಿಂಗ್ ಮತ್ತು ಅಪಾಯಕಾರಿ ಚಾಲನೆಯಲ್ಲಿ ತೊಡಗಿಸಿಕೊಂಡಿರುವುದು ಕಂಡು ಬಂದಿದೆ. ಪ್ರತಿ ವಾಹನ ಮಾಲೀಕರಿಗೆ 25,000 ರೂಪಾಯಿಗಳವರೆಗೆ ದಂಡ ವಿಧಿಸಲಾಗಿದೆ ಎಂದು ಅನುಚೇತ್ ಹೇಳಿದ್ದಾರೆ.
ಅಪರಾಧದ ಪ್ರಮಾಣ ಅವಲಂಬಿಸಿ, DL ಅಮಾನತುಗೊಳಿಸುವಿಕೆಯು 3 ತಿಂಗಳಿಂದ 6 ತಿಂಗಳವರೆಗೆ ಇರುತ್ತದೆ. ಸಂಚಾರ ಪೊಲೀಸರು ಅಮಾನತುಗೊಳಿಸಲು ಶಿಫಾರಸು ಮಾಡಿದ ಹೆಚ್ಚಿನ ಪರವಾನಗಿಗಳು ಅಪಾಯಕಾರಿ ಚಾಲನೆಯಲ್ಲಿ ತೊಡಗಿಕೊಂಡಿವೆ ಮತ್ತು ಅವರು ಪುನರಾವರ್ತಿತ ಪ್ರಕರಣಗಳಾಗಿವೆ.
ಅಮಾನತು ಅವಧಿಯಲ್ಲಿ ಮಾಲೀಕರು ವಾಹನ ಚಲಾಯಿಸುವುದು ಕಂಡುಬಂದಲ್ಲಿ, ದಂಡವನ್ನು ದ್ವಿಗುಣಗೊಳಿಸಲಾಗುವುದು ಎಂದು ಸಾರಿಗೆ ಹೆಚ್ಚುವರಿ ಆಯುಕ್ತ (ಜಾರಿ) ಸಿ ಮಲ್ಲಿಕಾರ್ಜುನ ತಿಳಿಸಿದ್ದಾರೆ. ಅಶಿಸ್ತಿನ ವಾಹನ ಸವಾರರ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಮುಕ್ತ ಹಸ್ತ ನೀಡಿದ್ದೇವೆ ಎಂದು ಸಾರಿಗೆ ಸಚಿವ ಆರ್.ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಕುಡಿದು ವಾಹನ ಚಲಾಯಿಸುವುದು ಮತ್ತು ವ್ಹೀಲಿಂಗ್ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ್ದು ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


