ರಾಜ್ಯ

ಬಿಜೆಪಿ ಮತ್ತು ಜೆಡಿಎಸ್ ನಾಯಕರು ಐಟಿ ಇಲಾಖೆ ಪ್ರತಿನಿಧಿಗಳಂತೆ ಏಕೆ ವರ್ತಿಸುತ್ತಿದ್ದಾರೆ: ಡಿಕೆ ಶಿವಕುಮಾರ್

ಗುತ್ತಿಗೆದಾರರೊಬ್ಬರ ಮನೆ ಮೇಲೆ ದಾಳಿ ನಡೆಸಿದಾಗ ಆದಾಯ ತೆರಿಗೆ ಅಧಿಕಾರಿಗಳು ವಶಪಡಿಸಿಕೊಂಡ 42 ಕೋಟಿ ರೂ. ಹಣವನ್ನು ಕಾಂಗ್ರೆಸ್ ಸರ್ಕಾರ ಮತ್ತು ಅದರ ನಾಯಕರಿಗೆ ಲಿಂಕ್ ಮಾಡಿದ್ದಕ್ಕಾಗಿ ಪ್ರತಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಜೆಡಿಎಸ್ ಹಾಗೂ ಬಿಜೆಪಿ ಮುಖಂಡರು ಐಟಿ ಇಲಾಖೆಯ ಪ್ರತಿನಿಧಿಗಳಂತೆ ಏಕೆ ವರ್ತಿಸುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಬಿಜೆಪಿ ಮತ್ತು ಜೆಡಿಎಸ್ ನಾಯಕರು ಐಟಿ ಇಲಾಖೆ ಪ್ರತಿನಿಧಿಗಳಂತೆ ಏಕೆ ವರ್ತಿಸುತ್ತಿದ್ದಾರೆ: ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
Published On :

ಬೆಂಗಳೂರು: ನಗರದ ಗುತ್ತಿಗೆದಾರರೊಬ್ಬರ ಮನೆ ಮೇಲೆ ದಾಳಿ ನಡೆಸಿದಾಗ ಆದಾಯ ತೆರಿಗೆ ಅಧಿಕಾರಿಗಳು ವಶಪಡಿಸಿಕೊಂಡ 42 ಕೋಟಿ ರೂ. ಹಣವನ್ನು ಕಾಂಗ್ರೆಸ್ ಸರ್ಕಾರ ಮತ್ತು ಅದರ ನಾಯಕರಿಗೆ ಲಿಂಕ್ ಮಾಡಿದ್ದಕ್ಕಾಗಿ ಪ್ರತಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಜೆಡಿಎಸ್ ಹಾಗೂ ಬಿಜೆಪಿ ಮುಖಂಡರು ಐಟಿ ಇಲಾಖೆಯ ಪ್ರತಿನಿಧಿಗಳಂತೆ ಏಕೆ ವರ್ತಿಸುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಹುಡುಕಾಟಗಳು, ಅದರ ಫಲಿತಾಂಶಗಳು ಮತ್ತು ವಶಪಡಿಸಿಕೊಂಡ ಸ್ವತ್ತಿನ ಬಗ್ಗೆ ಐಟಿ ಇಲಾಖೆ ಇನ್ನೂ ಅಧಿಕೃತ ಹೇಳಿಕೆಯನ್ನು ನೀಡಬೇಕಿದೆ ಎಂದು ಅವರು ಸೂಚಿಸಿದರು.

'ಅವರು (ಬಿಜೆಪಿ-ಜೆಡಿಎಸ್) ಅವರಿಗೆ ಬೇಕಾದ ಏನು ಬೇಕಾದರೂ ಮಾತನಾಡುತ್ತಾರೆ. ಆದಾಯ ತೆರಿಗೆ ಇಲಾಖೆ ಅಧಿಕೃತ ಹೇಳಿಕೆಯನ್ನು ನೀಡಲಿ, ನಂತರ ಮಾತನಾಡೋಣ. ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅಥವಾ ಬಿಜೆಪಿ ನಾಯಕರು ಆದಾಯ ತೆರಿಗೆ ಇಲಾಖೆಯ ಪ್ರತಿನಿಧಿಗಳಲ್ಲ. ಅವರು ಅದರ ಪ್ರತಿನಿಧಿಗಳಂತೆ ಮಾತನಾಡುತ್ತಿದ್ದಾರೆ' ಎಂದು ಶಿವಕುಮಾರ್ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ರಾಜ್ಯದಲ್ಲಿ ಇನ್ನಷ್ಟು ಐಟಿ ದಾಳಿಗಳನ್ನು ನಿರೀಕ್ಷಿಸುವಿರಾ’ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಈಗ ಏನನ್ನೂ ಹೇಳುವುದಿಲ್ಲ, ಆದಾಯ ತೆರಿಗೆ ಇಲಾಖೆ ಅವರ ಬಳಿ ಇರುವ ಮಾಹಿತಿಯನ್ನು ಬಿಡುಗಡೆ ಮಾಡಲಿ. ಅದರ ಬಗ್ಗೆ ನಂತರ ಮಾತನಾಡೋಣ’ ಎಂದರು. 

ಅಧಿಕೃತ ಮೂಲಗಳ ಪ್ರಕಾರ, ಕೆಲವು ಗುತ್ತಿಗೆದಾರರಿಗೆ ಸೇರಿದ ಮನೆಗಳಲ್ಲಿ ಐಟಿ ಅಧಿಕಾರಿಗಳು ಶೋಧ ನಡೆಸಿದ್ದಾರೆ ಮತ್ತು ನಗರದ ಗುತ್ತಿಗೆದಾರರೊಬ್ಬರ ಮನೆಯಲ್ಲಿ ಹಲವಾರು ಬಾಕ್ಸ್‌ಗಳಲ್ಲಿ ಸಂಗ್ರಹಿಸಲಾಗಿದ್ದ ಅಪಾರ ಪ್ರಮಾಣದ ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಕಾಂಗ್ರೆಸ್ ಸರ್ಕಾರವನ್ನು ಗುರಿಯಾಗಿಸಿ ಹಲವಾರು ಬಿಜೆಪಿ ನಾಯಕರು ಮತ್ತು ಜೆಡಿಎಸ್‌ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು, ಐಟಿ ಅಧಿಕಾರಿಗಳು ವಶಪಡಿಸಿಕೊಂಡಿರುವ ಹಣವನ್ನು ಗುತ್ತಿಗೆದಾರರಿಂದ ಕಮಿಷನ್ ರೂಪದಲ್ಲಿ ಸಂಗ್ರಹಿಸಲಾಗಿದೆ. ಇದು ಕಾಂಗ್ರೆಸ್ ನಾಯಕರಿಗೆ ಸೇರಿದ್ದು ಎಂದು ಆರೋಪಿಸಿದ್ದಾರೆ. 

ಪಂಚ ರಾಜ್ಯಗಳ ವಿಧಾನಸಬೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ತೆಲಂಗಾಣ ಮತ್ತು ಮಧ್ಯ ಪ್ರದೇಶಕ್ಕೆ ಕರ್ನಾಟಕದಿಂದ ಹಣ ಸರಬರಾಜು ಆಗುತ್ತಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ, ಇದು ಎಟಿಎಂ ನಂತೆ ಕಾರ್ಯನಿರ್ವಹಿಸುತ್ತದೆ ಎಂದು ದೂರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.