ವಿಚಾರವಾದಿ ಕೆಎಸ್ ಭಗವಾನ್ ಬಂಧನಕ್ಕೆ ಒಕ್ಕಲಿಗರ ಸಂಘ ಆಗ್ರಹ, ಮನೆ ಮುತ್ತಿಗೆ ಯತ್ನ
ಪುರಭವನದ ಆವರಣದಲ್ಲಿ ಶುಕ್ರವಾರ ನಡೆದ ಮಹಿಷ ದಸರಾ ಆಚರಣೆ ವೇಳೆ ಒಕ್ಕಲಿಗ ಸಮುದಾಯದವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ವಿರೋಧಿಸಿ ಒಕ್ಕಲಿಗರ ಸಂಘದ ನೂರಾರು ಕಾರ್ಯಕರ್ತರು ಶನಿವಾರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದರಿಂದ ವಿಚಾರವಾದಿ ಕೆಎಸ್ ಭಗವಾನ್ ಅವರ ಮನೆ ಬಳಿ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.

ಮೈಸೂರು: ಇಲ್ಲಿನ ಪುರಭವನದ ಆವರಣದಲ್ಲಿ ಶುಕ್ರವಾರ ನಡೆದ ಮಹಿಷ ದಸರಾ ಆಚರಣೆ ವೇಳೆ ಒಕ್ಕಲಿಗ ಸಮುದಾಯದವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ವಿರೋಧಿಸಿ ಒಕ್ಕಲಿಗರ ಸಂಘದ ನೂರಾರು ಕಾರ್ಯಕರ್ತರು ಶನಿವಾರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದರಿಂದ ವಿಚಾರವಾದಿ ಕೆಎಸ್ ಭಗವಾನ್ ಅವರ ಮನೆ ಬಳಿ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.
ಮೈಸೂರು-ಚಾಮರಾಜನಗರ ಒಕ್ಕಲಿಗರ ಸಂಘದ ನೇತೃತ್ವದಲ್ಲಿ ಕೆಎಸ್ ಭಗವಾನ್ ಮನೆ ಮುಂದೆ ಜಮಾಯಿಸಿದ ಪ್ರತಿಭಟನಾಕಾರರು, ಅವರನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
ಪೊಲೀಸರು ಹಾಕಿದ್ದ ಬ್ಯಾರಿಕೇಡ್‌ಗಳನ್ನು ಪಕ್ಕಕ್ಕೆ ತಳ್ಳಿ, ಮನೆಯೊಳಗೆ ನುಗ್ಗಲು ಯತ್ನಿಸಿದರು. ಆದರೆ, ಹೆಚ್ಚಿನ ಸಂಖ್ಯೆಯಲ್ಲಿದ್ದ ಪೊಲೀಸರು ಪ್ರತಿಭಟನಾಕಾರರನ್ನು ಮನೆಯೊಳಗೆ ಪ್ರವೇಶಿಸದಂತೆ ತಡೆದರು.
'ಭಗವಾನ್ ಒಕ್ಕಲಿಗ ಸಮುದಾಯಕ್ಕೆ ಸೇರಿದವರಾಗಿದ್ದರೂ, ಅವರು ಯಾವಾಗಲೂ ತಮ್ಮ ಜನರನ್ನೇ ಗುರಿಯಾಗಿಸಿಕೊಂಡಿದ್ದಾರೆ' ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಭಗವಾನ್ ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ಮಾಜಿ ಪ್ರಾಧ್ಯಾಪಕ ಮಹೇಶ್ ಚಂದ್ರ ಗುರು ಅವರನ್ನು ಬಂಧಿಸಿ ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ರಾಜ್ಯ ಒಕ್ಕಲಿಗರ ಸಂಘದ ಸಂಚಾಲಕ ಕೆವಿ ಶ್ರೀಧರ್ ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


