ರಾಜ್ಯ

ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ರಾಜ್ಯ ಬಿಜೆಪಿ ಜಿಲ್ಲಾ ಕೇಂದ್ರಗಳಲ್ಲಿ ಸರ್ಕಾರದ ವಿರುದ್ಧ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿದೆ.

ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
ಬಿಜೆಪಿ
Published On :

ಬೆಂಗಳೂರು: ರಾಜ್ಯ ಬಿಜೆಪಿ ಜಿಲ್ಲಾ ಕೇಂದ್ರಗಳಲ್ಲಿ ಸರ್ಕಾರದ ವಿರುದ್ಧ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿದೆ. 

ಇತ್ತೀಚೆಗೆ ನಡೆದ ಐಟಿ ದಾಳಿಯಲ್ಲಿ, ಮಾಜಿ ಕಾರ್ಪೊರೇಟರ್ ಬಳಿ ಇದ್ದ 42 ಕೋಟಿ ರೂಪಾಯಿಯೂ ಸೇರಿ 50 ಕೋಟಿ ರೂಪಾಯಿ ನಗದು ಪತ್ತೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿ ಬಿಜೆಪಿ ಪ್ರತಿಭಟನೆ ನಡೆದಿದೆ.  

ಐಟಿ ದಾಳಿಯ ವೇಳೆ ಪತ್ತೆಯಾದ ಹಣಕ್ಕೂ ಕಾಂಗ್ರೆಸ್ ಗೂ ಸಂಬಂಧವಿದೆ ಎಂದು ಬಿಜೆಪಿ ಆರೋಪಿಸಿದೆ. ಕಾಂಗ್ರೆಸ್‌ನ ಎಟಿಎಂ ಸರ್ಕಾರ, 5 ರಾಜ್ಯಗಳ ವಿಧಾನಸಭಾ ಚುನಾವಣೆಗಳಿಗೆ ಹಣ ಕಳಿಸಲು, ಹಣವನ್ನು ಸಂಗ್ರಹಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

ಜಿಲ್ಲೆಗಳ ಪ್ರಮುಖ ಸ್ಥಳಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧದ ಪ್ರತಿಭಟನೆಗೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕರೆ ನೀಡಿದ್ದರು. ತುಮಕೂರು, ಬೀದರ್, ವಿಜಯಪುರ, ಶಿವಮೊಗ್ಗ, ಕಲಬುರಗಿ, ಚಿಕ್ಕೋಡಿಯಲ್ಲಿ ಪ್ರತಿಭಟನೆಗಳು ನಡೆದಿವೆ.

ಮಂಗಳವಾರ (ಅ.17) ರಂದು ಬೆಂಗಳೂರು ಮತ್ತು ರಾಜ್ಯದ ಇತರ ಕೆಲವು ಪ್ರಮುಖ ನಗರಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಬಿಜೆಪಿ ನಿರ್ಧರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.