ಬೆಂಗಳೂರು: ತನ್ನ ಸ್ನೇಹಿತರೊಂದಿಗೆ ದೈಹಿಕ ಸಂಬಂಧ ಹೊಂದುವಂತೆ ಪತ್ನಿಗೆ ಬಲವಂತ, ವ್ಯಕ್ತಿ ವಿರುದ್ಧ FIR!
ತನ್ನ ಸ್ನೇಹಿತರೊಂದಿಗೆ ದೈಹಿಕ ಸಂಬಂಧ ಹೊಂದುವಂತೆ ಪತ್ನಿಗೆ ಒತ್ತಾಯಿಸಿದ ಆರೋಪದ ಮೇಲೆ ವ್ಯಕ್ತಿಯೋರ್ವನ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಬೆಂಗಳೂರು: ತನ್ನ ಸ್ನೇಹಿತರೊಂದಿಗೆ ದೈಹಿಕ ಸಂಬಂಧ ಹೊಂದುವಂತೆ ಪತ್ನಿಗೆ ಒತ್ತಾಯಿಸಿದ ಆರೋಪದ ಮೇಲೆ ವ್ಯಕ್ತಿಯೋರ್ವನ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಈ ಬಗ್ಗೆ ಮಹಿಳೆ ಪೊಲೀಸರಿಗೆ ದೂರು ನೀಡಿದ ನಂತರ ಘಟನೆ ಬೆಳಕಿಗೆ ಬಂದಿದೆ. ಪತ್ನಿ ದೂರಿನ ಮೇರೆಗೆ ಬೆಂಗಳೂರಿನ ಅಮೃತಹಳ್ಳಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಗಂಡನ ಒತ್ತಾಯವನ್ನು ನಿರಾಕರಿಸಿದ್ದಕ್ಕೆ ಆತ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಿದ್ದಾನೆ ಎಂದು ಪತ್ನಿ ಆರೋಪಿಸಿದ್ದಾರೆ.
2007ರಲ್ಲಿ ಸಂತ್ರಸ್ತೆ ಮಂಗಳೂರು ಮೂಲದ ವ್ಯಕ್ತಿಯನ್ನು ಮದುವೆಯಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಆಕಸ್ಮಿಕವಾಗಿ ಗಂಡನ ಮೊಬೈಲ್ ನಲ್ಲಿ ವಾಟ್ಸಾಪ್ ಚಾಟ್ಗಳನ್ನು ನೋಡಿದ ಮಹಿಳೆ ಆಂತಕಗೊಂಡಿದ್ದಾರೆ. ಆರೋಪಿಯು ತನ್ನ ಸ್ನೇಹಿತರೊಂದಿಗೆ ತಮ್ಮ ನಡುವಿನ ಆತ್ಮೀಯ ವಿಷಯಗಳನ್ನು ಚರ್ಚಿಸಿರುವುದು ಗೊತ್ತಾಗಿದೆ.
ಇದನ್ನೂ ಓದಿ: ಟಿವಿ ರಿಮೋಟ್ಗಾಗಿ ಜಗಳ: ತಂದೆಯ ಕೋಪಕ್ಕೆ ಮಗ ಬಲಿ
ಅಷ್ಟೇ ಅಲ್ಲದೆ ಗಂಡ ಲೈಂಗಿಕ ಕಾರ್ಯಕರ್ತರೊಂದಿಗೂ ಚಾಟ್ ಮಾಡಿರುವುದನ್ನು ಕಂಡುಬಂದಿದೆ. ಈ ಕುರಿತು ಪ್ರಶ್ನಿಸಿದಾಗ ಗಂಡ ಕೊಲ್ಲುವ ಬೆದರಿಕೆ ಹಾಕಿದ್ದಾನೆ. ಇದಾದ ನಂತರ ಸಂತ್ರಸ್ತೆ ತನ್ನ ಪೋಷಕರೊಂದಿಗೆ ವಿಷಯವನ್ನು ಹೇಳಿಕೊಂಡಿದ್ದಾಳೆ. ಪೋಷಕರು ತಮ್ಮ ನಡುವೆ ರಾಜಿ ಪಂಚಾಯ್ತಿ ಮಾಡಿಸಿದ್ದರು.
ಇಷ್ಟಾದರೂ ಗಂಡ ತನ್ನನ್ನು ಸರಿಪಡಿಸಿಕೊಳ್ಳದೆ ಮತ್ತೆ ಲೈಂಗಿಕ ಕಾರ್ಯಕರ್ತರೊಂದಿಗೆ ಸಂಪರ್ಕವನ್ನು ಮುಂದುವರೆಸಿದ್ದಾನೆ. ಇಷ್ಟಕ್ಕೆ ಸುಮ್ಮನಾಗದೇ ಪತ್ನಿಯ ಮೇಲೆ ಹಲ್ಲೆ ನಡೆಸಿ ತನ್ನ ಸ್ನೇಹಿತರೊಂದಿಗೆ ಮಲಗುವಂತೆ ಒತ್ತಾಯಿಸಿದ್ದಾನೆ. ಕೊನೆಗೆ ಚಿತ್ರಹಿಂಸೆ ತಾಳಲಾರದೆ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾಳೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


