ಬೆಂಗಳೂರು: ಪ್ಯಾಲೆಸ್ತೀನ್ ಪರ ಎಂಜಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದವರ ವಿರುದ್ಧ ಎಫ್‍ಐಆರ್ ದಾಖಲು
ಪ್ಯಾಲೆಸ್ತೀನ್ ಮೇಲೆ ಇಸ್ರೇಲ್ ನಡೆಸುತ್ತಿರುವ ದಾಳಿಯನ್ನು ಭಾರತ ಖಂಡಿಸಬೇಕು ಎಂದು ಒತ್ತಾಯಿಸಿ ನಗರದ ಎಂಜಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದವರ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಪ್ಯಾಲೆಸ್ತೀನ್ ಮೇಲೆ ಇಸ್ರೇಲ್ ನಡೆಸುತ್ತಿರುವ ದಾಳಿಯನ್ನು ಭಾರತ ಖಂಡಿಸಬೇಕು ಎಂದು ಒತ್ತಾಯಿಸಿ ನಗರದ ಎಂಜಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದವರ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರತಿಭಟನೆ ನಡೆಸುವ ಬಗ್ಗೆ ಪೊಲೀಸ್ ಇಲಾಖೆಯ ಗಮನಕ್ಕೆ ತಂದಿಲ್ಲ. ಅನುಮತಿ ಪಡೆಯದೇ ಏಕಾಏಕಿ ಪ್ರತಿಭಟನೆ ನಡೆಸಿದ ಹಿನ್ನೆಲೆ ಪ್ರತಿಭಟನಾಕಾರರ ವಿರುದ್ಧ ಎಫ್‍ಐಆರ್ ದಾಖಲಿಸಿ, ತನಿಖೆಗೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು, ಪ್ಯಾಲೆಸ್ತೀನ್ ಮೇಲೆ ನಡೆಸುತ್ತಿರುವ ಇಸ್ರೇಲ್ ದಾಳಿಯನ್ನು ಭಾರತ ಖಂಡಿಸಬೇಕೆಂದು ವಿರೋಧಿಸಿ ಫೆಲೆಸ್ತೀನ್ ಪರವಾಗಿ ಪ್ರತಿಭಟನೆ ನಡೆಸಿ ಘೊಷಣೆ ಕೂಗಿದವರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. 25 ಜನರನ್ನು ವಶಕ್ಕೆ ಪಡೆದು ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


