ಕೈಗಾರಿಕಾ ಪ್ರದೇಶಕ್ಕೆ ಲೋಡ್ ಶೆಡ್ಡಿಂಗ್ ಇಲ್ಲ: ಇಂಧನ ಇಲಾಖೆ ಸ್ಪಷ್ಟನೆ
ಕೈಗಾರಿಕಾ ಪ್ರದೇಶಗಳಲ್ಲಿ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ. ನಿರಂತರ ವಿದ್ಯುತ್ ಪೂರೈಸಲಾಗುವುದು’ ಎಂದು ಇಂಧನ ಇಲಾಖೆ ಮಂಗಳವಾರ ಸ್ಪಷ್ಟಪಡಿಸಿದೆ.

ಬೆಂಗಳೂರು: ಕೈಗಾರಿಕಾ ಪ್ರದೇಶಗಳಲ್ಲಿ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ. ನಿರಂತರ ವಿದ್ಯುತ್ ಪೂರೈಸಲಾಗುವುದು’ ಎಂದು ಇಂಧನ ಇಲಾಖೆ ಮಂಗಳವಾರ ಸ್ಪಷ್ಟಪಡಿಸಿದೆ.
ನಿನ್ನೆಯಷ್ಟೇ ಬೆಸ್ಕಾಂ ವಲಯದ ಕೈಗಾರಿಕಾ ಪ್ರತಿನಿಧಿಗಳ ಜತೆಗೆ ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ ಅವರು ವಿಡಿಯೋ ಸಂವಾದ ನಡೆಸಿದರು.
‘ರಾಜ್ಯ ವಿದ್ಯುತ್ ಅಭಾವ ಎದುರಿಸುತ್ತಿದ್ದರೂ ಬೆಸ್ಕಾಂ ವಲಯದ ಕೈಗಾರಿಕಾ ಪ್ರದೇಶಗಳಿಗೆ ನಿರಂತರ ವಿದ್ಯುತ್ ನೀಡಲಾಗುವುದು’ ಎಂದು ಭರವಸೆ ನೀಡಿದರು.
ಪೀಣ್ಯ, ಬಿಡದಿ, ಹೊಸಕೋಟೆ, ಎಲೆಕ್ಟ್ರಾನಿಕ್ಸ್ ಸಿಟಿ, ಕುಂಬಳಗೋಡು, ಮಾಲೂರು, ನೆಲಮಂಗಲ, ದಾಬಸ್‌ಪೇಟೆ, ದಾವಣಗೆರೆ, ತುಮಕೂರು, ಕೋಲಾರ, ಗೌರಿಬಿದನೂರು, ವೈಟ್‌ಫೀಲ್ಡ್, ಹೇರೋಹಳ್ಳಿ ಸೇರಿದಂತೆ ವಿವಿಧೆಡೆಯ ಉದ್ಯಮ ಸಂಘಗಳ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ: ಮೂರು ದಿನದಲ್ಲಿ ಖಾಸಗಿ ವಿದ್ಯುತ್ ಉತ್ಪಾದಕರಿಂದ ರಾಜ್ಯಕ್ಕೆ 1,100 ಮೆಗಾವ್ಯಾಟ್ ವಿದ್ಯುತ್ ಪೂರೈಕೆ: ಕೆಜೆ ಜಾರ್ಜ್
ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ (ಬೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬಿಳಗಿ ಸೇರಿದಂತೆ ಸರ್ಕಾರಿ ಅಧಿಕಾರಿಗಳಿಗೆ ಕೈಗಾರಿಕಾ ಸಂಸ್ಥೆಗಳು ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯ ಕೊರತೆಯಿಂದ ಉಂಟಾಗಬಹುದಾದ ಸಮಸ್ಯೆಗಳ ಬಗ್ಗೆ ತಿಳಿಸಿದವು.
ಸೋಮವಾರ, ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್ ಸಂಘಗಳ ಸದಸ್ಯರು ಹೆಚ್ಚುತ್ತಿರುವ ವಿದ್ಯುತ್ ಕಡಿತದ ಬಗ್ಗೆ ಕಳವಳ ವ್ಯಕ್ತಪಡಿಸಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರು.
ಸಚಿವ ಕೆಜೆ ಜಾರ್ಜ್ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೂ ಈ ಪತ್ರವನ್ನು ರವಾನಿಸಲಾಗಿತ್ತು. ವಿದ್ಯುತ್ ಕಡಿತದಿಂದ ಕೋಲ್ಡ್ ಸ್ಟೋರೇಜ್‌ನಲ್ಲಿರುವ ವಸ್ತುಗಳು ಕೊಳೆಯಲು ಆರಂಭಿಸಿರುವುದರಿಂದ ಆರ್ಥಿಕ ನಷ್ಟ ಅನುಭವಿಸುತ್ತಿದ್ದೇವೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


