ಕ್ರೀಡಾಪಟುಗಳಿಗೆ ಎಲ್ಲಾ ಇಲಾಖೆಗಳ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ: ಸಿಎಂ ಸಿದ್ದರಾಮಯ್ಯ ಭರವಸೆ
ಇತ್ತೀಚೆಗೆ ಚೀನಾದಲ್ಲಿ ನಡೆದ 19ನೇ ಏಷ್ಯನ್ ಗೇಮ್ಸ್‌ನಲ್ಲಿ ಪದಕ ಪಡೆದ ರಾಜ್ಯದ ಕ್ರೀಡಾಪಟುಗಳು ಮತ್ತು ತರಬೇತುದಾರರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಸನ್ಮಾನಿಸಿ, ನಗದು ಪುರಸ್ಕಾರ ಪ್ರದಾನ ಮಾಡಿ ಅವರು ಮಾತನಾಡಿದರು.

ಬೆಂಗಳೂರು: ಪ್ರಸ್ತುತ ಪೊಲೀಸ್ ಮತ್ತು ಅರಣ್ಯ ಇಲಾಖೆಯಲ್ಲಿ ಕ್ರೀಡಾಪಟುಗಳಿಗೆ ನೇಮಕಾತಿಯಲ್ಲಿ ಶೇ 3ರಷ್ಟು ಮೀಸಲಾತಿ ನೀಡಲಾಗುತ್ತಿದ್ದು, ಇತರ ಇಲಾಖೆಗಳಲ್ಲಿಯೂ ಶೇ 2 ರಷ್ಟು ಮೀಸಲಾತಿ ನೀಡುವ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇತ್ತೀಚೆಗೆ ಚೀನಾದಲ್ಲಿ ನಡೆದ 19ನೇ ಏಷ್ಯನ್ ಗೇಮ್ಸ್‌ನಲ್ಲಿ ಪದಕ ಪಡೆದ ರಾಜ್ಯದ ಕ್ರೀಡಾಪಟುಗಳು ಮತ್ತು ತರಬೇತುದಾರರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಸನ್ಮಾನಿಸಿ, ನಗದು ಪುರಸ್ಕಾರ ಪ್ರದಾನ ಮಾಡಿ ಅವರು ಮಾತನಾಡಿದರು.
'ದೇಶ ಮತ್ತು ರಾಜ್ಯದ ಗೌರವ ಹೆಚ್ಚು ಮಾಡಿದ್ದೀರಿ. ಸಮಸ್ತ ಕನ್ನಡಿಗರಿಗೆ ಹೆಮ್ಮೆಯ ವಿಷಯ. ಈ ಬಾರಿ ಚೀನಾದಲ್ಲಿ ನಡೆದ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು ಅತ್ಯಧಿಕ ಪದಕಗಳನ್ನು ಗೆದ್ದಿದ್ದಾರೆ. ಕಳೆದ ಬಾರಿ 70, ಈ ಬಾರಿ 107 ಪದಕ ಗೆದ್ದಿದ್ದಾರೆ. ರಾಜ್ಯದ ಎಂಟು ಮಂದಿ ಪದಕಗಳನ್ನು ಗೆದ್ದಿದ್ದಾರೆ.' ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
'ಇಡೀ ಜಗತ್ತಿನಲ್ಲಿ ಜನಸಂಖ್ಯೆಯಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ಏಷ್ಯನ್ ಗೇಮ್ಸ್‌ನಲ್ಲಿಯೂ ಮೊದಲ-ಎರಡನೇ ಸ್ಥಾನ ಬಂದರೆ ಗೌರವ ಹೆಚ್ಚಾಗುತ್ತದೆ' ಎಂದೂ ಅಭಿಪ್ರಾಯಪಟ್ಟರು.
'ರಾಜ್ಯ ಸರ್ಕಾರ ಕ್ರೀಡೆಗೆ ಉತ್ತೇಜನ ನೀಡಲು ಬದ್ಧವಾಗಿದೆ. ನಾನು ಹಿಂದೆ ಮುಖ್ಯಮಂತ್ರಿ ಆಗಿದ್ದಾಗ ಏಷ್ಯನ್ ಗೇಮ್ಸ್, ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಬಹುಮಾನ ಮೊತ್ತ ನೀಡುವ ಕುರಿತು ಘೋಷಿಸಲಾಗಿತ್ತು. ಅತಿ ಹೆಚ್ಚು ಮೊತ್ತದ ಬಹುಮಾನ ಘೋಷಿಸಿದ ಮೊದಲ ರಾಜ್ಯ ನಮ್ಮದು' ಎಂದು ಅವರು ವಿವರಿಸಿದರು.
'ಈಗ ನಮ್ಮ ರಾಜ್ಯದಿಂದ ಎಂಟು ಮಂದಿ ಪದಕ ಪಡೆದಿದ್ದಾರೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆಲ್ಲುವುದು ಸಣ್ಣ ವಿಷಯವಲ್ಲ. ಇದಕ್ಕೆ ಅಪಾರ ಪರಿಶ್ರಮದ ಅಗತ್ಯವಿದೆ. ನೀವು ಅದ್ಭುತ ಸಾಧನೆ ಮಾಡಿದ್ದೀರಿ. ಒಲಿಂಪಿಕ್ಸ್‌ನಲ್ಲಿಯೂ ಪದಕ ಗೆಲ್ಲುವ ಪ್ರಯತ್ನ ಮಾಡಿ' ಎಂದು ಶುಭ ಹಾರೈಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


